ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಜೈಲಿನಲ್ಲಿಡಲಾಗಿದೆ. ಆದರೆ ಅವರ ವಿರುದ್ಧದ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸಿಟ್ ಅಧಿಕಾರಿಗಳು ಮತ್ತೆ 5 ದಿನ ಕಸ್ಟಡಿಗೆ ಪಡೆದಿದ್ದಾರೆ.
ಎರಡು ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಎಸ್‍ಐಟಿ ಇದೀಗ ಮೂರನೇ ಪ್ರಕರಣದಲ್ಲಿ ಕಸ್ಟಡಿಗೆ ಪಡೆದುಕೊಂಡಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ನೀಡಿದ ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.
ನಿನ್ನೆ ದಿನ ಎರಡನೇ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾ ಸಂತೋಷ್ ಗಜಾನನ ಭಟ್ ಆದೇಶಿಸಿದ್ದರು. ಜಾಮೀನು ಕೋರಿ ಪ್ರಜ್ವಲ್ ಅರ್ಜಿ ಸಲ್ಲಿಸಿದ್ದು ಜೂ. 24ಕ್ಕೆ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಈ ಮಧ್ಯೆ ಇಂದು ಎಸ್‍ಐಟಿ ಪ್ರಜ್ವಲ್ ವಿರುದ್ಧದ 3ನೇ ಅತ್ಯಾಚಾರ ಪ್ರಕರಣದಲ್ಲಿ ಕಸ್ಟಡಿಗೆ ಪಡೆದಿದೆ.