ಶಿವಮೊಗ್ಗ : ಜಿಲ್ಲೆಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಗಳಾಗುತ್ತಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದ ಆರ್.ಎಂ.ಮಂಜುನಾಥ ಗೌಡರು ಜೆಡಿಎಸ್ ಸೇರಲಿ ದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕೆಲವು ದಿನಗಳ ಹಿಂದೆ ಅವರು ಶೃಂಗೇರಿಯಲ್ಲಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದರು. ಇಂದು ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.
ಆರ್.ಎಂ.ಮಂಜುನಾಥ ಗೌಡರು ಪಕ್ಷ ಸೇರಿರುವುದ ರಿಂದ ತೀರ್ಥಹಳ್ಳಿ ಕ್ಷೇತ್ರದ ಚುನಾವಣಾ ಕಣ ಕುತೂಹ ಲಕ್ಕೆ ಕಾರಣವಾಗಿದೆ. ಹಾಲಿ ಶಾಸಕ ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಆರ್.ಎಂ. ಮಂಜುನಾಥ ಗೌಡ ನಡುವೆ ಮುಂಬರುವ ಚುನಾವಣೆ ಯಲ್ಲಿ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ. ಕಳೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
ಕಾಂಗ್ರೆಸ್‌ನಿಂದ ದೂರವಾಗಿದ್ದರು : ೨೦೧೩ರ ಚುನಾವಣೆಯಲ್ಲಿ ೩೫,೮೧೭ ಮತಗಳನ್ನು ಪಡೆದು ಆರ್.ಎಂ.ಮಂಜುನಾಥ ಗೌಡರು ಸೋಲು ಅನುಭವಿಸಿದ್ದರು. ನಂತರ ಕಾಂಗ್ರೆಸ್ ಸೇರಿದ್ದರು. ಆದರೆ, ಪಕ್ಷದ ಚಟುವಟಿಕೆಗಳಿಂದ ದೂರವಿದ್ದರು.
ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಬಲ : ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ಸ್ಥಾನಗಳಲ್ಲಿ ಜೆಡಿಎಸ್ ೨೦೧೩ರ ಚುನಾವಣೆಯಲ್ಲಿ ಜಯಗಳಿಸಿದೆ. ಸೊರಬ – ಮಧು ಬಂಗಾರಪ್ಪ, ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ‍್ಯನಾಯ್ಕ, ಭದ್ರಾವತಿ – ಅಪ್ಪಾಜಿ ಗೌಡ ಶಾಸಕರು. ಆರ್.ಎಂ.ಮಂಜುನಾಥ ಗೌಡರು ಪಕ್ಷ ಸೇರಿರುವುದರಿಂದ ಪಕ್ಷದ ಬಲ ಹೆಚ್ಚಿದೆ.