Thursday, September 19, 2024
Google search engine
Homeಇ-ಪತ್ರಿಕೆಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ: ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿಕೆ    

ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿಕೊಳ್ಳುವುದು ನಮ್ಮ ಕರ್ತವ್ಯ: ಶಾಸಕ ಬಿ.ಕೆ.ಸಂಗಮೇಶ್ವರ್‌ ಹೇಳಿಕೆ    

ಭದ್ರಾವತಿ:  ದೇಶದ ಸ್ವಾಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ ನೇತೃತ್ವದಲ್ಲಿ ನಡೆದ ಹೋರಾಟದ ಫಲ ಇಂದು ನಾವು ನೀವುಗಳೆಲ್ಲರೂ ಶಾಂತಿ ನೆಮ್ಮದಿಯಿಂದ ಬಾಳಲು ಸಾಧ್ಯವಾಗಿದೆ. ಇದನ್ನು ನಾವೆಂದಿಗೂ ಮರೆಯಬಾರದು. ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮವನ್ನು ಇಂದಿನ ಪೀಳಗೆಯ ಯುವ ಜನತೆ ಅರ್ಥ ಮಾಡಿಕೊಳ್ಳಬೇಕಿದೆ ಶಾಸಕ ಬಿ.ಕೆ.ಸಂಗೇಶ್ವರ ಕರೆ ನೀಡಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ಗುರುವಾರ ಇಲ್ಲಿನ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ಏರ್ಪಡಿಸಿದ್ದ ೭೭ ನೇ ಸ್ವಾತಂತ್ರ್ರ್ಯ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸ್ವಾತಂತ್ರ್ಯ ಪಡೆಯಲು ನೆಡದ ಹೋರಾಟದ ಇತಿಹಾಸಗಳನ್ನು ಕೋಡುಗೆಗಳ ಮಹತ್ವವವನ್ನು ತಿಳಿಸಬೇಕು. ಇದರ ಫಲವಾಗಿ ನಾವು ಯಾವುದೇ ರೀತಿಯ ಅಧಿಕಾರಗಳನ್ನು ಹೊಂದಿದ್ದರೂ ಅದು ಸಾರ್ವಜನಿಕರ ಸೇವೆ ಮಾಡಲು ಹೋರತು ಅಧಿಕಾರದ ಅಮಲನ್ನು ಅನುಭವಿಸಲು ಅಲ್ಲ ಎಂದರು.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಬಂದಾಗ ಅವರಿಗೆ ಗೌರವ ನೀಡಿ ಅವರ ಕೆಲಸ ಕಾರ್ಯಗಳನ್ನು ಸರರಾಗವಾಗಿ ಮಾಡಕೊಡಬೇಕು. ವಿನಾಕಾರಣ ಕಚೇರಿಗೆ ಅಲೆದಾಡಿಸಬೇಡಿ ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮನವಿ ಮಾಡಿದರು.

ತಹಶೀಲ್ದಾರ್ ಕೆ.ಆರ್.ನಾಗರಾಜು ಅವರು ಧ್ವಜಾರೋಹಣ ನೆರವೇರಿಸಿ ಪಥ ಸಂಚಲನ ವೀಕ್ಷೀಸಿದರು. ಇದೇ ಸಂಧರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಡಿವೈಎಸ್‌ಪಿ ಕೆ.ಆರ್.ನಾಗರಾಜ್, ತಾಪಂ ಇಒ ಎಂ.ಗಂಗಣ್ಣ, ನಗರಸಭೆ ಪೌರಾಯುಕ್ತ ಪರಕಾಶ್ ಎನ್ ಚನ್ನಪ್ಪನವರ್, ಬಿಇಒ ಎ.ಕೆ.ನಾಗೇಂದ್ರಪ್ಪ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು, ಚುನಾಯಿತ ಪ್ರತಿನಿಧಿಗಳು, ಗಣ್ಯರುಗಳು  ವೇದಿಕೆಯಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments