ಮಧುಬಂಗಾರಪ್ಪ ಗೆಲುವು ಬಹುತೇಕ ಖಚಿತ : ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಬಿ.ಬಿ. ನಿಂಗಯ್ಯ

ಶಿವಮೊಗ್ಗ : ಶಿವವಗ್ಗ ಲೋಕ ಸಭಾ ಉಪಚುನಾವಣೆಯಲ್ಲಿ ಕ್ಷೇತ್ರದ ಪ್ರಜ್ಞಾವಂತ ಮತದಾರರು ಈ ಬಾರಿ ಮಧು ಬಂಗಾರಪ್ಪರನ್ನು ಅತ್ಯಧಿಕ ಮತಗಳ ಅಂತರದಿಂದ ಆರಿಸಿ ಕಳುಹಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಕೋಮುವಾದಿ ಶಕ್ತಿ ಹಾಗೂ ಜಾತ್ಯಾತೀತ ಶಕ್ತಿಗಳ ನಡುವೆ ನಡೆಯುತ್ತಿರುವ ಈ ಉಪಚುನಾ ವಣೆಯ ಸಮರದಲ್ಲಿ ಯುವನಾಯಕ ಮಧುಬಂಗಾರಪ್ಪನವರು ಆಯ್ಕೆಯಾ ಗುವುದು ಬಹುತೇಕ ಖಚಿತ ಎಂದರು.
ಬಂಗಾರಪ್ಪನವರು ಗ್ರಾಮೀಣ ಕೃಪಾಂಕ, ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ರಾಜ್ಯದ ಜನತೆಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರದ ಪ್ರಜ್ಞಾವಂತ ಜನ ಬಂಗಾರಪ್ಪನವರ ಪುತ್ರ ಮಧುಬಂಗಾರಪ್ಪನವರನ್ನು ಆಯ್ಕೆ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಬಿ.ಎಸ್.ಯಡಿಯೂರಪ್ಪನವರು ಹಿರಿಯ ನಾಯಕರಾಗಿದ್ದಾರೆ. ಅವರು ಮತ್ತೊಬ್ಬ ನಾಯಕರ ಬಗ್ಗೆ ಮಾತನಾಡುವಾಗ ಯೋಚಿಸಿ ಮಾತನಾಡಬೇಕು. ಮುಖ್ಯಮಂತ್ರಿ ಕುಮಾರಸ್ವಾಮಿ ವಾಲ್ಮೀಕಿ ಜಯಂತಿಗೆ ಹೋಗದೇ ಇರುವುದರ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ ಎಂದರು.
ಮಾಜಿ ಶಾಸಕ ಕೋನರೆಡ್ಡಿ ಮಾತನಾಡಿ, ಯಡಿಯೂರಪ್ಪನವರು ಜೆಡಿಎಸ್‌ನಲ್ಲಿ ಕುಟುಂಬ ರಾಜ ಕಾರಣದ ಬಗ್ಗೆ ಮಾತನಾಡುತ್ತಾರೆ. ಈ ರೀತಿ ಮಾತನಾಡುವ ಮೊದಲು ತಮ್ಮ ಪಕ್ಷದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಅರಿಯಬೇಕೆಂದರು.
ಇವರ ಮಕ್ಕಳೇ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಜಗದೀಶ್ ಶೆಟ್ಟರ್ ಹಾಗೂ ಸಹೋದರ, ಉಮೇಶ್ ಕತ್ತಿ ಅವರ ಸಹೋದರ, ಉದಾಸಿ ಮತ್ತು ಅವರ ಪುತ್ರ ಹೀಗೆ ಆ ಪಕ್ಷದಲ್ಲಿ ಕುಟುಂಬ ರಾಜಕಾರ ಣವಿದೆ. ಇದನ್ನು ಅರಿಯದೇ ಯಡಿಯೂರಪ್ಪನವರು ಜೆಡಿಎಸ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದರು.
ಮೈತ್ರಿ ಕೂಟದ ಬಗ್ಗೆ ಬಿಜೆಪಿ ಯವರು ಹಗುರವಾಗಿ ಮಾತನಾಡು ತ್ತಿದ್ದಾರೆ. ಆದರೆ ಈ ಬಾರಿಯ ಉಪಚುನಾವಣೆಯಲ್ಲಿ ರಾಜ್ಯದ ಮತದಾರರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಐದೂ ಉಪಚುನಾ ವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಮಂಜುನಾಥ್, ರಾಜೀವ್ ಮುಂತಾದವರು ಉಪಸ್ಥಿತರಿದ್ದರು.