Thursday, December 5, 2024
Google search engine
Homeಇ-ಪತ್ರಿಕೆಕಾಂತ ರಾಜ್ ವರದಿ ಸಾರ್ವಜನಿಕ ಚರ್ಚೆಗೆ ಬಿಟ್ಟು ಅನುಷ್ಠಾನಕ್ಕೆ ಒತ್ತಾಯ

ಕಾಂತ ರಾಜ್ ವರದಿ ಸಾರ್ವಜನಿಕ ಚರ್ಚೆಗೆ ಬಿಟ್ಟು ಅನುಷ್ಠಾನಕ್ಕೆ ಒತ್ತಾಯ

ಶಿವಮೊಗ್ಗ: ಕಾಂತರಾಜ್ ವರದಿಯನ್ನು ಸಾರ್ವಜನಿಕ ಚರ್ಚೆಗೆ ಬಿಟ್ಟು ಅನುಷ್ಠಾನಗೊಳಿಸಬೇಕೆಂದು ಮಾಜಿ ವಿಧಾನ ಪರಿಷತ್ತು ಸದಸ್ಯರಾದ ಆರ್.ಕೆ ಸಿದ್ದರಾಮಣ್ಣ  ಒತ್ತಾಯಿಸಿದರು.

ಬುಧವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ಸರ್ವೋಚ್ಚ ನ್ಯಾಯಾಲಯದ ಆಶಯದಂತೆ ಮುಖ್ಯ ಮಂತ್ರಿಸಿದ್ದರಾಮಯ್ಯನವರು ಈ ಹಿಂದೆ ಮುಖ್ಯ ಮಂತ್ರಿಯಾಗಿದ್ದಾಗ ಅವರ ಆಡಳಿತಾವಧಿಯಲ್ಲಿ ಹಿಂದುಳಿದ ಆಯೋಗದ ವತಿಯಿಂದ ಕಾಂತರಾಜ್ ವರದಿಯನ್ನು ಸಿದ್ಧಪಡಿಸಿದ್ದು, ಇದು ಎಲ್ಲ ಸಮುದಾಯಗಳ, ಸಾಮಾಜಿಕ, ಆರ್ಥಿಕ ಹಾಗು ಶೈಕ್ಷಣಿಕ ಸಮೀಕ್ಷೆಯಾಗಿದ್ದು ಇದನ್ನು ಸರಕಾರವು ಸಾವರ್ಜನಿಕ ಚರ್ಚೆಗೆ ಬಿಟ್ಟು ಅನುಷ್ಠಾನಗೊಳಿಸಲು ಒಕ್ಕೂಟ ಒತ್ತಾಯಿಸುತ್ತದೆ ಎಂದು ಅವರು ಹೇಳಿದರು.

ಭಾರತದ ಜನಗಣತಿ ಸಮೀಕ್ಷೆ 2021ರಲ್ಲಿ ನಡೆಯಬೇಕಾಗಿತ್ತು. ಆದರೆ (10 ವರ್ಷಗಳಿಗೊಮ್ಮೆ) ಇಲ್ಲಿಯವರೆಗೂ ನಡೆಸಿರುವುದಿಲ್ಲ. ಕೂಡಲೇ ಸರ್ಕಾರವು ಜನಗಣತಿ ಸಮೀಕ್ಷೆ ನಡೆಸಲು ಒತ್ತಾಯಿಸುತ್ತದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದಲ್ಲಿ ಸುಮಾರು 9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇದನ್ನು ಸರ್ಕಾರವು ಭರ್ತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಖಾಸಗಿ ವಲಯದಲ್ಲಿಯೂ ಮೀಸಲಾತಿಯನ್ನು ಜಾರಿಗೆ ತರಬೇಕು. ಕೇಂದ್ರ ಸರ್ಕಾರವು ಸಾರ್ವಜನಿಕ ಉದ್ದಿಮೆಗಳನ್ನು ಮನಸೋ ಇಚ್ಛೆ ಖಾಸಗೀಕರಣಗೊಳಿಸುರುವುದನ್ನು ಮಾಡುತ್ತಿದೆ ಎಂದು ಟೀಕಿಸಿದರು.

ನೂತನ ಕೇಂದ್ರ ಸರ್ಕಾರವು ದೇಶದಾದ್ಯಂತ “ಸಾಮಾಜಿಕ, ಶೈಕ್ಷಣಿಕ ಜನಗಣತಿ ಸಮೀಕ್ಷೆ” ನಡೆಸಬೇಕೆಂದು ಒಕ್ಕೂಟವು ಒತ್ತಾಯಿಸುತ್ತದೆ ಎಂದರು.

ಶಿವಮೊಗ್ಗ ನಗರದ ಬಾಲರಾಜ್ ಅರಸ್ ಇಲ್ಲಿ “ದಿ. ದೇವರಾಜ್ ಅರಸು ಭವನ” ನಿರ್ಮಾಣಗೊಂಡಿರುತ್ತದೆ. ಸದರಿ ಕಾಮಗಾರಿ ಪೂರ್ಣಗೊಳಿಸಲು ರೂ. 3 ಕೋಟಿಗಳ ಅನುದಾನ ಬೇಕಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಇತ್ತ ಕಡೆ ಗಮನಹರಿಸಬೇಕೆಂದು ಮಾಜಿ ವಿಧಾನ ಪರಿಷತ್ತು ಸದಸ್ಯ ಆರ್‍.ಕೆ.ಸಿದ್ದರಾಮಣ್ಣ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಜಿಲ್ಲಾ ಅಧ್ಯಕ್ಷ ವಿ.ರಾಜು, ಪದಾಧಿಕಾರಿಗಳಾದ ರಾಜೇಶ್, ಚಂದ್ರಶೇಖರ್‍, ನಾಗರತ್ನಮ್ಮ, ತಿಮ್ಮಪ್ಪ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments