ಬೆಂಗಳೂರು: ಪ್ರಜ್ವಲ್ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಆರ್.ನಗರದ ನಿವಾಸಿಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ನಿರೀಕ್ಷಣಾ ಜಾಮೀನು ನೀಡಿದೆ. ಜೊತೆಗೆ, ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಆದೇಶ ಹೊರಡಿಸಿದೆ.
ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ, ತನಿಖೆಗೆ ಅವರು ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ ಎಂದು ಕೋರ್ಟ್ ಹೇಳಿದೆ.