Monday, July 22, 2024
Google search engine
Homeಇ-ಪತ್ರಿಕೆಅಪಹರಣ ಪ್ರಕರಣ: ಇಂದು ಭವಾನಿ ರೇವಣ್ಣ ಅರ್ಜಿಯ ಆದೇಶ ಪ್ರಕಟ

ಅಪಹರಣ ಪ್ರಕರಣ: ಇಂದು ಭವಾನಿ ರೇವಣ್ಣ ಅರ್ಜಿಯ ಆದೇಶ ಪ್ರಕಟ

ಬೆಂಗಳೂರು:  ಪ್ರಜ್ವಲ್ ಪ್ರಕರಣದ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ.

ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಬಂಧದಲ್ಲಿ ಪ್ರಥಮ ಆರೋಪಿ ಎಚ್.ಡಿ.ರೇವಣ್ಣ ಬಂಧನಕ್ಕೊಳಗಾಗಿ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ದೂರಿನಲ್ಲಿ ಭವಾನಿಯವರ ಹೆಸರೂ ಇರುವ ಕಾರಣ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು. ಭವಾನಿಯವರನ್ನು ಬಂಧನ ಮಾಡಕೂಡದೆಂದು ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು.

RELATED ARTICLES
- Advertisment -
Google search engine

Most Popular

Recent Comments