Sunday, September 8, 2024
Google search engine
Homeಅಂಕಣಗಳುಲೇಖನಗಳುರಾಜ್ಯ ಸರ್ಕಾರದ ವಿರುದ್ಧ ಕೆ.ಎಸ್.ಈಶ್ವರಪ್ಪ ಆರೋಪ

ರಾಜ್ಯ ಸರ್ಕಾರದ ವಿರುದ್ಧ ಕೆ.ಎಸ್.ಈಶ್ವರಪ್ಪ ಆರೋಪ

ಶಿವಮೊಗ್ಗ : ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಡೆಯುತ್ತಿದ್ದರೂ ಕೂಡಾ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದರು
ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಶರತ್ ಹತ್ಯೆ ಪ್ರಕರಣ ಖಂಡಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೂ ೨೪ ಹಿಂದೂ ಯುವಕರ ಹತ್ಯೆಯಾಗಿದೆ. ಆದರೆ, ಇದುವರೆಗೂ ರಾಜ್ಯ ಸರ್ಕಾರ ಕೊಲೆಗಡು ಕರನ್ನು ಪತ್ತೆ ಹಚ್ಚುವಂತಹ ಕಾರ್ಯಕ್ಕೆ ಮುಂದಾಗಿಲ್ಲ ಎಂದು ದೂರಿದರು.
ಸದನದ ಒಳಗಡೆ ಈ ಬಗ್ಗೆ ವಿಷಯ ಪ್ರಸ್ತಾ ಪಿಸಿದರೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಧಟತನದ ಉತ್ತರ ನೀಡುತ್ತಾರೆ. ಯಾವುದೋ ಹಳೇ ವೈಷಮ್ಯ, ಅವರ ವೈಯಕ್ತಿಕ ಕಾರಣಗಳಿಂದ ಕೊಲೆಗಳು ನಡೆ ದಿವೆ ಎಂಬ ಹಾರಿಕೆ ಉತ್ತರ ನೀಡುವ ಮೂಲಕ ಮುಖ್ಯಮಂತ್ರಿಗಳು ಬೇಜವಾ ಬ್ದಾರಿ ತನದಿಂದ ವರ್ತಿಸಿದ್ದಾರೆ ಎಂದು ಟೀಕಿಸಿದರು.
ರಾಷ್ಟ್ರವಿರೋಧಿ ಸಂಘಟನೆಗಳನ್ನು ನಿಷೇಧಿಸದೇ ಕೇವಲ ಓಟ್‌ಬ್ಯಾಂಕ್‌ಗಾಗಿ ಅವರನ್ನು ಓಲೈಸುವಂತಹ ಕಾರ್ಯವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದರೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಹೇಗೆ ಬರಬೇಕೆಂ ಬುದರ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ಮೂದಲಿಸಿದರು.
ನಿಷ್ಠಾವಂತ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದ ಅವರು, ಡಿಐಜಿ ರೂಪಾ ಅವರ ವರ್ಗಾವಣೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರಸ್ತುತ ನಡೆಯುತ್ತಿರುವ ವಿದ್ಯಮಾನದ ಬಗ್ಗೆ ರಾಜ್ಯದ ಜನತೆಯ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಧ್ವಜ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿ ಪ್ರತ್ಯೇಕ ಧ್ವಜಕ್ಕೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರತಿಭಟನೆಯಲ್ಲಿ ಜಿ.ಪಂ. ಸದಸ್ಯ ಕೆ.ಈ.ಕಾಂತೇಶ್, ಡಿ.ಎಸ್.ಅರುಣ್‌ಕುಮಾರ್, ಪವಿತ್ರಾ ರಾಮಯ್ಯ, ಗಿರೀಶ್ ಪಟೇಲ್, ಮಧುಸೂದನ್, ಮೊದಲಾದವರಿದ್ದರು.

RELATED ARTICLES
- Advertisment -
Google search engine

Most Popular

Recent Comments