Sunday, October 13, 2024
Google search engine
Homeಇ-ಪತ್ರಿಕೆಲೋಕಸಭೆ:  ಮತ ಎಣಿಕೆಗೆ ಸಕಲ ಸಿದ್ದತೆ; 1372949 ಮತ ಚಲಾವಣೆ, 523 ಸಿಬ್ಬಂದಿಯಿಂದ ಮತ ಎಣಿಕೆ

ಲೋಕಸಭೆ:  ಮತ ಎಣಿಕೆಗೆ ಸಕಲ ಸಿದ್ದತೆ; 1372949 ಮತ ಚಲಾವಣೆ, 523 ಸಿಬ್ಬಂದಿಯಿಂದ ಮತ ಎಣಿಕೆ


ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾಹಿತಿ

ಶಿವಮೊಗ್ಗ: ಜಿಲ್ಲೆಯ ಜನತೆ ಕಾತರದಿಂದ ಕಾಯುತ್ತಿರುವ  ಲೋಕಸಭಾ ಚುನಾವಣೆಯ  ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ. ಜೂ. ೪ ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಗತ್ಯ ಸಿಬ್ಬಂದಿ ಹಾಗೂ ಸೂಕ್ತ ಬಂದೋಬಸ್ತ್‌ ಮೂಲಕ ಜಿಲ್ಲಾಡಳಿತವು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡಿದೆ.

ಲೋಕಸಭಾ ಚುನಾವಣೆಯ ಮತ ಎಣಿಕೆ ಸಿದ್ದತೆ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ  ಅವರು ಶುಕ್ರವಾರ ಜಿಲ್ಲಾಧಿಕಾರಿಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಜೂ. 4 ರಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಗ್ಗೆ 8.00 ಗಂಟೆಯಿಂದ ಶುರುವಾಗಲಿದೆ.ಲೋಕಸಭಾ ಚುನಾವಣೆಯಲ್ಲಿ ಒಟ್ಟು 1752885 ಮತದಾರರು ಇದ್ದು ಒಟ್ಟು 1372949 ಮತ ಚಲಾವಣೆಯಾಗಿದೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದರು.

ಮತ ಎಣಿಕೆ ಕುರಿತು ಅಭ್ಯರ್ಥಿಗಳಿಗೆ ಅಥವಾ ಚುನಾವಣಾ ಏಜೆಂಟರಿಗೆ ಜೂ.4 ರಂದು ಬೆಳಗ್ಗೆ 7 ಗಂಟೆಗೆ ಮತ ಎಣಿಕೆ ಕೇಂದ್ರದ ಭದ್ರತಾ ಕೊಠಡಿಯ ಆವರಣಕ್ಕೆ ಆಗಮಿಸಲು ತಿಳಿಸಲಾಗಿದೆ. ಬೆಳಿಗ್ಗೆ 7.00 ಗಂಟೆಗೆ ಭದ್ರತಾ ಕೊಠಡಿಯ ಬಾಗಿಲನ್ನು ತೆರೆಯಲು ಕ್ರಮವಹಿಸುವ ಮಾಹಿತಿಯನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ 14 ಮತ ಎಣಿಕೆ ಟೇಬಲ್ ಗಳು ಇರುತ್ತದೆ. ಮತ ಎಣಿಕೆ ಟೆಬಲ್ ಕೌಂಟರ್‌ ಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳು ಮತ್ತು ಚುನಾವಣಾ ಏಜೆಂಟರು ಹಾಗೂ ಮತ ಎಣಿಕೆ ಏಜೆಂಟರು ಪ್ರವೇಶಿಸಲು ಅವಕಾಶವಿರುತ್ತದೆ ಎಂದರು.

 ಅಂಚೆ ಮತಪತ್ರಗಳನ್ನು ಬೆಳಿಗ್ಗೆ 8.00 ಗಂಟೆಗೆ ಚುನಾವಣಾಧಿಕಾರಿಗಳ ಮೇಜಿನಲ್ಲಿ ಆರಂಭಿಸಲಾಗುವುದು. ಅಂಚೆ ಮತಪತ್ರಗಳ ಎಣಿಕೆ ಆರಂಭವಾದ 30 ನಿಮಿಷಗಳ ನಂತರ ಕಂಟ್ರೋಲ್ ಯೂನಿಟ್ ಮೂಲಕ ಮತ ಎಣಿಕೆಯನ್ನು ಆರಂಬಿಸಲಾಗುವುದು. ಪ್ರತೀ ಮತ ಎಣಿಕೆ ಟೇಬಲ್ ಗೆ ಒಬ್ಬರು ಮೇಲ್ವಿಚಾರಕರು, ಒಬ್ಬರು ಸಹಾಯಕರು ಮತ್ತು ಒಬ್ಬರು ಮೈಕ್ರೋ ಅಬ್ಸರ್ವರ್ ಗಳನ್ನು ನೇಮಕಗೊಳಿಸಿ ತರಬೇತಿ ನೀಡಲಾಗಿದೆ. ಇ.ವಿ.ಎಂ ಮತ ಎಣಿಕೆಗಳು ಪೂರ್ಣಗೊಂಡ ನಂತರ ಪ್ರತೀ ವಿಧಾನಸಭಾ ಕ್ಷೇತ್ರದಿಂದ ಐದು ವಿವಿಪ್ಯಾಟ್‍ಗಳ ಎಣಿಕೆಯನ್ನು ಒಂದಾದ ಮೇಲೆ ಒಂದರಂತೆ ಎಣಿಕೆ ಕಾರ್ಯ ಮಾಡಲಾಗುತ್ತದೆ. ಮತ ಎಣಿಕೆ ಹಾಲ್ ನಲ್ಲಿ ಮೊಬೈಲ್ ಗಳಿಗೆ ಅವಕಾಶವಿರುವುದಿಲ್ಲಎಂದು ಸ್ಪಷ್ಟಪಡಿಸಿದರು.

ಮತ ಎಣಿಕೆ ಆವರಣದ ಸುತ್ತಮುತ್ತ ಸೆಕ್ಷನ್ 144 ನ್ನು ಜಾರಿ ಮಾಡಲಾಗಿದೆ ಮಾಧ್ಯಮ ಕೇಂದ್ರವನ್ನು ಮತ ಎಣಿಕೆ ಆವರಣದಲ್ಲಿ ಪ್ರತ್ಯೇಕ ಕೊಠಡಿಯನ್ನು ತೆರೆಯಲಾಗಿದೆ ವಿಧಾನಸಭಾ ಕ್ಷೇತ್ರ 18ರಿಂದ21 ಸುತ್ತಿನ ಎಣಿಕೆ ನಡೆಯಲಿದ್ದು ಪ್ರತಿಯೊಂದು ಸುತ್ತಿನ ಫಲಿತಾಂಶವನ್ನು ಚುನಾವಣಾ ವೀಕ್ಷಕರ ಸಹಿ ಹಾಕಿದ ನಂತರ ಮಾಧ್ಯಮ ಹಾಗೂ ಮೈಕ್ ಮೂಲಕ ತಿಳಿಸಲಾಗುತ್ತದೆ ಎಂದರು.
………………………………………

ಬಂದೋಬಸ್ತ್‌ ಗೆ ೧ ಸಾವಿರ ಪೊಲೀಸ್‌

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮಾತನಾಡಿ,  ಲೋಕಸಭಾ ಚುನಾವಣೆ ಮತ ಏಣಿಕೆ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಸಹ್ಯಾದ್ರಿ ಕಾಲೇಜು ಮುಖ್ಯರಸ್ತೆ, ಎಂಆರ್ ಎಸ್ ವೃತ್ತ ವಾಹನ ಸಂಚಾರ ನಿಷೇಧಿಸಲಾಗಿದ್ದು ವಾಹನ ಸವಾರರಿಗೆ ಬದಲಿ ಮಾರ್ಗ ಕಲ್ಪಿಸಲಾಗಿದೆ. 1000ಕ್ಕೂ ಅಧಿಕ ಪೋಲಿಸ್ ಸಿಬ್ಬಂದಿ, ಹೋಂ ಗಾರ್ಡ್, ಕೆಎಸ್‍ಆರ್‍ಪಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಸೂಕ್ಷ್ಮ ಪ್ರದೇಶಗಳ ಮೇಲೆ ನಿಗಾ ವಹಿಸಲಾಗಿದೆ ಹಾಗೂ ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸಭೆಗಳನ್ನು ನಡೆಸಿ ಮಾಹಿತಿಯನ್ನು ನೀಡಿಲಾಗಿದೆ ಎಂದರು.

RELATED ARTICLES
- Advertisment -
Google search engine

Most Popular

Recent Comments