Thursday, December 5, 2024
Google search engine
Homeಇ-ಪತ್ರಿಕೆಇಂದು ಬೆಳ್ಳಂಬೆಳಗ್ಗೆ 56 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಇಂದು ಬೆಳ್ಳಂಬೆಳಗ್ಗೆ 56 ಕಡೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು  56 ಕಡೆಗಳಲ್ಲಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಅತ್ತ ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್​ ಮನೆ ಮೇಲೆ ದಾಳಿ ನಡೆದಿದೆ.

ಒಟ್ಟು 9 ಜಿಲ್ಲೆಗಳಲ್ಲಿ ದಾಳಿ ಆರಂಭವಾಗಿದೆ. ಈ ದಾಳಿ ಕಾರ್ಯಾಚರಣೆಯಲ್ಲಿ ಒಟ್ಟು 100 ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಕೆಲ ಸರಕಾರಿ ಅಧಿಕಾರಿಗಳ ಹೆಸರನ್ನು ಈ ಕೆಳಗೆ ಕೊಡಲಾಗಿದೆ.

ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ್ ಬೆನ್ನೂರು

ಹಾಸನದ ಗ್ರಾಮ ಪಂಚಾಯಿತಿಯೊಂದರ ಗ್ರೇಡ್-1 ಕಾರ್ಯದರ್ಶಿ ಎನ್.ಎಂ. ಜಗದೀಶ್

ಕೋಲಾರದ ತಹಶೀಲ್ದಾರ್ ವಿಜಯಣ್ಣ

ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖ‌ರ್ ಗೌಡ

ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಶಿವರಾಜು ಎಸ್.

ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಾಗಿ

ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ

ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ.

ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕೆ.ಜಿ. ಜಗದೀಶ್

ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್.ಉಮೇಶ್

ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯ‌ರ್ ಎಂ.ಎಸ್. ಪ್ರಭಾಕರ

ಈ ಮೇಲಿನ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಎಲ್ಲ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್‌ ಎಫ್‌ಐಆರ್ ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments