ಮೆಗ್ಗಾನ್‌ಗೆ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಗೆ ಎಂ.ಆರ್.ಐ. ಸ್ಕ್ಯಾನಿಂಗ್ ಯಂತ್ರವನ್ನು ಒದಗಿಸಿಕೊಡಲಾಗುವುದು ಎಂದು ವೈದ್ಯ ಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಇಂದು ಇಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿನ ಆಸ್ಪತ್ರೆಯಲ್ಲಿ ಎಲ್ಲಾ ಆಧುನಿಕ ಸೌಲಭ್ಯ ಗಳು ಇವೆ ಎಂಬ ಬಗ್ಗೆ ಮಾಹಿತಿ ಸಿಕ್ಕಿವೆ. ಎಂಆರ್‌ಐ ಸ್ಕ್ಯಾನಿಂಗ್ ಯಂತ್ರದ ಅವಶ್ಯ ಕತೆ ಇದೆ ಎಂದು ಇಲ್ಲಿನ ವೈದ್ಯರುಗಳು ತಿಳಿಸಿದ್ದಾರೆ. ಇದನ್ನು ಶೀಘ್ರದಲ್ಲಿಯೇ ಪೂರೈಸಲಾಗುವುದು ಎಂದರು.
ಎಂ.ಆರ್.ಐ. ಸ್ಕ್ಯಾನಿಂಗ್ ಯಂತ್ರವನ್ನು ಒದಗಿಸುವುದು ಕಷ್ಟವೇನಲ್ಲ. ಆದರೆ, ಅದಕ್ಕೆ ಬೇಕಾದಂತಹ ರೇಡಿಯಾಲಜಿಸ್ಟ್ ಅವಶ್ಯಕತೆ ಯಿದೆ. ಆದ್ದರಿಂದ ತಜ್ಞ ವೈದ್ಯರು ನೇಮಕ ಗೊಂಡ ನಂತರ ಎಂ.ಆರ್.ಐ. ಸ್ಕ್ಯಾನಿಂಗ್ ಯಂತ್ರವನ್ನು ಆಸ್ಪತ್ರೆಗೆ ಒದಗಿಸಿಕೊಡ ಲಾಗುವುದು ಎಂದರು.
೯೫೦ ಹಾಸಿಗೆಯುಳ್ಳ ಇಲ್ಲಿನ ಆಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆಧುನಿಕ ಸೌಲಭ್ಯಗಳು ಇವೆ. ಅಲ್ಲದೆ, ಸಿಬ್ಬಂದಿಗಳೂ ಕೂಡಾ ಇದ್ದಾರೆ. ಆದರೂ ಸಹ ಇತ್ತೀಚೆಗೆ ಒಂದು ಘಟನೆ ನಡೆದಿದೆ. ಅದು ನಡೆಯಬಾರದಿತ್ತು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯ ಬಾರದು. ಇದಕ್ಕೆ ಸಂಬಂಧಿಸಿದಂತೆ ಸಂಬಂಧ ಪಟ್ಟ ವೈದ್ಯರಿಗೆ ಹಾಗೂ ಸಿಬ್ಬಂದಿ ವರ್ಗ ದವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇಲ್ಲಿನ ಮೆಡಿಕಲ್ ಕಾಲೇಜಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ೫೦ಹೆಚ್ಚುವರಿ ಸೀಟು ಗಳನ್ನು ಮಂಜೂರು ಮಾಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿರುವ ೬ ಮೆಡಿಕಲ್ ಕಾಲೇಜು ಗಳಿಗೂ ಸಹ ೫೦ ಹೆಚ್ಚುವರಿ ಸೀಟುಗಳನ್ನು ಮಂಜೂರು ಮಾಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಶಾಸಕರುಗಳಾದ ಕೆ.ಬಿ. ಪ್ರಸನ್ನಕುಮಾರ್, ಆರ್. ಪ್ರಸನ್ನಕುಮಾರ್, ಕಾಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ ಮೊದಲಾದವರು ಉಪಸ್ಥಿತರಿದ್ದರು.