ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾ ನಟ ಶಿವರಾಜ್ ಕುಮಾರ್ ನಂತರ ಹಲವು ಚಿತ್ರಗಳಲ್ಲಿ ನಟಿಸುವಲ್ಲಿ ನಿರತರಾಗಿದ್ದಾರೆ. ಶುಕ್ರವಾರ ಮಡದಿ ಗೀತಾ ಅವರ ಹುಟ್ಟುಹಬ್ಬದಂದೇ ಚಿತ್ರತಂಡ ಹೊಸ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಅವರಿಗೆ ಶುಭ ಕೋರಿದೆ.
ಈ ಚಿತ್ರಕ್ಕೆ ತೆಲುಗು ಚಿತ್ರ ನಿರ್ದೇಶಕ ಕಾರ್ತಿಕ್ ಅದ್ವೈತ್ ಅಕ್ಷನ್ ಕಟ್ ಹೇಳಲಿದ್ದಾರೆ. ಇದು ಅವರಿಗೆ ಸ್ಯಾಂಡಲ್ ವುಡ್ ನ ಎರಡನೆ ಚಿತ್ರವಾಗಿದೆ.
ಈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಡಿಫೆರೆಂಟ್ ಲುಕ್‌ನಲ್ಲಿ ಕಾಣಸಿಕೊಳ್ಳಲಿದ್ದಾರೆ. ಬರುವ ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ.