Sunday, September 8, 2024
Google search engine
Homeಇ-ಪತ್ರಿಕೆಸರ್ಜಿ ಜನರ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ: ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್

ಸರ್ಜಿ ಜನರ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ: ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್

ಶಾಸಕರಿಗೆ ಅಭಿನಂದನಾ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಅಭಿನಂದನಾ ಸಮಾರಂಭ

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಡಾ. ಧನಂಜಯ ಸರ್ಜಿ ಅವರು ಜನ ಮೆಚ್ಚುವಂತೆ ಸೇವೆ ಸಲ್ಲಿಸುವ ಮೂಲಕ ಪದವೀಧರರು ಹಾಗೂ ಜನರ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಜಿಲ್ಲಾ ಜಾತ್ಯಾತೀತ ಜನತಾದಳ ವತಿಯಿಂದ ವಿಧಾನ ಪರಿಷತ್‍ಗೆ ಆಯ್ಕೆಯಾದ ಶಾಸಕ ಧನಂಜಯ ಸರ್ಜಿ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉತ್ತಮ ಸಾಧನೆಯೊಂದಿಗೆ ಜನ ಮಾನಸದಲ್ಲಿರುವ ಡಾ. ಧನಂಜಯ ಸರ್ಜಿ ಅವರು ಮುಂದಿನ ದಿನಗಳಲ್ಲಿಯೂ ಉತ್ತಮ ಸೇವೆ ಸಲ್ಲಿಸುತ್ತಾರೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.  

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಶಾಸಕ ಡಾ. ಧನಂಜಯ ಸರ್ಜಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಇದು ಕಾರ್ಯಕರ್ತರ ಗೆಲುವು, ಪದವೀಧರರ ಗೆಲುವು, ಜೆಡಿಎಸ್ ಬಿಜೆಪಿ ಮೈತ್ರಿ ಶಕ್ತಿಯ ಗೆಲುವು, ಎಲ್ಲರ ಹಿರಿಯರ ಸಲಹೆ, ಸೂಚನೆ, ಮಾರ್ಗದರ್ಶನ ಪಡೆದು ಪರಿಷತ್‍ನಲ್ಲಿ ಪದವೀಧರರ ಧ್ವನಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ಹೇಳಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಅವರು ಶಿಕ್ಷಕ ಕ್ಷೇತ್ರದಿಂದ ಆಯ್ಕೆಯಾದ ಎಸ್.ಎಲ್.ಬೋಜೇಗೌಡರು ಹಾಗೂ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಡಾ. ಧನಂಜಯ ಸರ್ಜಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಕಾರ್ಯಾಧ್ಯಕ್ಷ ರಾಮಕೃಷ್ಣ, ಮಹಾ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್, ಯುವ ಜನತಾದಳ ಅಧ್ಯಕ್ಷ ಮಧು ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್, ಎಸ್.ಸಿ ಘಟಕ ಜಿಲ್ಲಾಧ್ಯಕ್ಷ ಕಾಂತರಾಜ್, ನಗರಾಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ವಕ್ತಾರ ನರಸಿಂಹ ಗಂಧದಮನೆ, ಯುವ ಜನತಾ ಜಿಲ್ಲಾ ಕಾರ್ಯಾಧ್ಯಕ್ಷ ನಿಖಿಲ್, ಮಾಜಿ ಎಪಿಎಂಸಿ ಉಪಾಧ್ಯಕ್ಷ ಮಹೇಶ್, ಮುಖಂಡ ವಿನಯ ಕುಮಾರ್, ಮಾಜಿ ನಗರ ಸಭಾ ಸದಸ್ಯ ಮಂಜುನಾಥ್, ವಿನಯ್, ಗೋಪಿ ಹಾಜರಿದ್ದರು.

RELATED ARTICLES
- Advertisment -
Google search engine

Most Popular

Recent Comments