ಶಿವಮೊಗ್ಗ : ಇಲ್ಲಿನ ಮಹಾನಗರ ಪಾಲಿಕೆಯ ೩೫ ವಾರ್ಡ್‌ಗಳಿಗೆ ಬಡಾ ವಣೆಗಳ ಪುನರ್ ವಿಂಗಡಣೆ ಕಾರ್ಯದ ಕ್ರಿಯಾ ಯೋಜನೆ ಕಾರ್ಯ ಬೆಂಗಳೂರಿಗೆ ಸ್ಥಳಾಂತರಗೊಂಡಿದೆ.
ಮಹಾನಗರಪಾಲಿಕೆಯ ವಾರ್ಡ್‌ಗಳಿಗೆ ಬಡಾವಣೆಗಳನ್ನು ಪುನರ್‌ವಿಂಗಡಿಸುವ ಸಲುವಾಗಿ ಕಳೆದ ಮಾರ್ಚ್ ೧೦ ರಂದು ಜಿಲ್ಲಾಧಿಕಾರಿಗಳು ಕರಡು ಅಧಿಸೂಚನೆ ಹೊರಡಿಸಿದ್ದರು. ಅಲ್ಲದೆ, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ೧೫ ದಿನಗಳ ಕಾಲ ಕಾಲಾವಕಾಶ ಕೂಡಾ ಕಲ್ಪಿಸಲಾಗಿತ್ತು. ಈ ಅವಧಿಯಲ್ಲಿ ಸಾಕಷ್ಟು ಸಂಖ್ಯೆಯ ಆಕ್ಷೇಪಣೆಗಳು ಸಲಹೆ, ಸೂಚನೆಗಳು ಡಿಯುಡಿಸಿ ಇಲಾಖೆಗೆ ಸಲ್ಲಿಕೆಯಾಗಿದ್ದವು.
ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಮತ್ತು ಸಲಹೆ, ಸೂಚನೆಗಳನ್ನು ಸಲ್ಲಿಸಿರು ವವರೊಂದಿಗೆ ಚರ್ಚಿಸುವ ಸಲುವಾಗಿ ಇಂದು ನಗರದ ಜಿಲ್ಲಾಧಿಕಾರಿಗಳ ಸಭಾಂಗಣ ದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿಯೇ ಸಭೆ ಕರೆಯಲಾಗಿತ್ತು. ಈ ನಡುವೆ ರಾಜ್ಯ ಸರ್ಕಾರ ಪಾಲಿಕೆ ಮಟ್ಟದ ವಾರ್ಡ್‌ಗಳ ಪುನರ್ ವಿಂಗಡಣಾ ಕಾರ್ಯದ ಬಗ್ಗೆ ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಚರ್ಚೆ ನಡೆಸುವ ಬಗ್ಗೆ ಆದೇಶ ಹೊರ ಡಿಸಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಈ ವಿಷಯ ವನ್ನು ಚರ್ಚಿಸುವಂತಿಲ್ಲ ಎಂದರು.
ಜಿಲ್ಲೆಯ ಉಳಿದ ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳು ಬಾರದ ಹಿನ್ನೆಲೆಯಲ್ಲಿ ಪುನರ್ ವಿಂಗಡಣೆ ಕಾರ್ಯ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಪಾಲಿಕೆ ಸದಸ್ಯ ಡಿ. ಮೋಹನ್ ರೆಡ್ಡಿ ಮಾತನಾಡಿ, ವಾರ್ಡ್‌ಗಳ ಪುನರ್ ವಿಂಗಡಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆಕ್ಷೇಪ ಣೆಗಳು ಮತ್ತು ಸಲಹೆಗಳು ಏನಾಗುತ್ತದೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬಂದಂತಹ ಎಲ್ಲಾ ಆಕ್ಷೇಪಣೆಗಳು ಹಾಗೂ ಸಲಹೆ ಸೂಚನೆಗಳನ್ನು ಸರ್ಕಾರದ ಕಾರ್ಯದರ್ಶಿ ಇಲಾಖೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಶಾಸಕ ಕೆ.ಜಿ. ಕುಮಾg ಸ್ವಾಮಿ, ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್, ಬಿಜೆಪಿ ಮುಖಂಡ ಎಸ್.ಎನ್.ಚನ್ನಬಸಪ್ಪ, ನಾಗರಾಜ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.