ಉಪ ಚುನಾವಣೆಯಲ್ಲಿ ಜನರು ಆಶೀರ್ವದಿಸಲಿದ್ದಾರೆ : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ಶಿವಮೊಗ್ಗ: ದಕ್ಷಿಣದಲ್ಲಿ ಬಿಜೆಪಿ ಹೆಬ್ಬಾಗಿಲನ್ನು ಮುಚ್ಚಿಸುವ ಭಾಗ ವಾಗಿ ಸಮ್ಮಿಶ್ರ ಅಭ್ಯರ್ಥಿಯನ್ನು ಶಿವ ಮೊಗ್ಗ ಲೋಕಸಭಾ ಉಪ ಚುನಾವಣೆ ಯಲ್ಲಿ ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್- ಜೆಡಿಎಸ್ ಒಟ್ಟಾಗಿ ಕೆಲಸ ಮಾಡಿ ಮಧು ಬಂಗಾರಪ್ಪರನ್ನು ಗೆಲ್ಲಿಸಲಿ ದ್ದೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಮಾತ ನಾಡಿದ ಅವರು, ರಾಷ್ಟ್ರ ರಾಜಕಾರಣ ದಲ್ಲಿ ಮಾರ್ಪಾಡು ಮಾಡಲು ಕಾಂಗ್ರೆಸ್- ಜೆಡಿಎಸ್ ಒಂದಾಗಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಈಗ ಚುನಾವಣೆಯನ್ನು ಎದುರಿ ಸುತ್ತಿದ್ದೇವೆ ಎಂದರು.
ಈಗಾಗಲೇ ಎರಡೂ ಪಕ್ಷಗಳ ನಾಯಕರು ಒಂದಾಗಿ ಚುನಾವಣೆ ಕೆಲಸ ಪ್ರಾರಂಭಿಸಿದ್ದಾರೆ. ಆದರೆ ಕಾರ್ಯಕರ್ತರಿಗೆ ಇರಿಸು ಮುರಿಸು ಆಗುತ್ತಿದೆ, ಅವರಲ್ಲಿನ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಎಲ್ಲರೂ ಒಟ್ಟಾಗಿ ಎರಡೂ ಪಕ್ಷಗಳ ಒಮ್ಮತದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆಯ ಕೊನೆಯ ೨ ದಿನ ಸಾಕು ಜನರು ನಮ್ಮತ್ತ ಬದಲಾಗಲು. ಸಾರ್ವಜನಿಕವಾಗಿ ಯಾರಿಗೆ ಮತ ಹಾಕಬೇಕೆಂಬ ಚರ್ಚೆ ಆರಂಭವಾಗಿದೆ. ಈಗಾಗಲೇ ಶೇ.೪೫ರಷ್ಟು ಸಂಖ್ಯೆಯಲ್ಲಿರುವ ಯುವ ಪೀಳಿಗೆಗೆ ಮೋದಿ ಯಾವ ಭರವಸೆ ಈಡೇರಿಸಿಲ್ಲ ಎಂಬ ಭಾವನೆ ಬಂದಿದೆ. ಇಂಧನ ಬೆಲೆ ಏರಿಕೆ,ಅಗತ್ಯ ವಸ್ತುಗಳ ಬೆಲೆ ಏರಿಕೆ ಹೀಗೆ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯವೂ ನಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.
೨೦೧೯ರ ಲೋಕಸಭೆ ಚುನಾವಣೆಗೆ ಈಗ ರಾಜ್ಯದಲ್ಲಿ ನಡೆಯುತ್ತಿರುವ ೫ ಕ್ಷೇತ್ರಗಳ ಉಪ ಚುನಾವಣೆ ದಿಕ್ಸೂಚಿಯಾಗಲಿದೆ. ಜನರ ಅಪೇಕ್ಷೆಯಂತೆ ರಚನೆ ಆಗಿರುವ ಮೈತ್ರಿ ಸರ್ಕಾರದ ಪರ ಜನರು ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ವಿವಿಧೆಡೆ ನಡೆದ ೧೩ ಲೋಕಸಭೆ ಉಪ ಚುನಾವಣೆಯಲ್ಲಿ ೧ರಲ್ಲಿ ಮಾತ್ರ ಬಿಜೆಪಿ ಗೆದ್ದಿದ್ದು, ಉಳಿದೆಡೆ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ಗೆದ್ದಿವೆ. ರಾಜ್ಯದಲ್ಲಿ ಆದ ರಾಷ್ಟ್ರ ರಾಜಕಾರಣದಲ್ಲಿ ಮಾರ್ಪಾಡು ತರುವಲ್ಲಿ ಪ್ರಮುಖ ಹೆಜ್ಜೆ ಇಟ್ಟಿದೆ ಎಂದು ಅಭಿಪ್ರಾಯಪಟ್ಟರು.
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಈ ಉಪ ಚುನಾವಣೆ ಯಲ್ಲಿ ಉತ್ತಮ ವಾತಾವರಣವಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಿಗೆ ಕೆಲಸ ಮಾಡಿ ಮಧು ಬಂಗಾರಪ್ಪರನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದರು.
ಮಾಜಿ ಶಾಸಕಿ ಶಾರದಾ ಪೂರ‍್ಯನಾಯ್ಕ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನ. ಶ್ರೀನಿವಾಸ್, ಎಐಸಿಸಿ ಸದಸ್ಯ ವಿಶ್ವನಾಥ್, ಅಮರನಾಥ್, ವಿಧಾನಪರಿಷತ್ ಮಾಜಿ ಸದಸ್ಯ ಜಿ. ಮಾದಪ್ಪ ಸುದ್ದಿಗೋಷಿಯಲ್ಲಿ ಉಪಸ್ಥಿತರಿದ್ದರು.

SHARE
Previous article23 OCT 2018
Next article24 OCT 2018

LEAVE A REPLY

Please enter your comment!
Please enter your name here