ಶಿವಮೊಗ್ಗ: ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ. ಜು.12ರಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಎಬಿವಿಪಿಯ ದಕ್ಷಿಣ ಪ್ರಾಂತ್ಯದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಹೆಚ್.ಕೆ. ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆಗಳು ಸಾಕಷ್ಟಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದುವರೆಗೂ ಬಸ್ ಪಾಸ್ ಸಿಕ್ಕಿಲ್ಲ. ಅಲ್ಲದೆ ಬಸ್‌ಗಳ ಸಂಖ್ಯೆಯೂ ಕೂಡ ಕಡಿಮೆ ಇದೆ. ಇದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಶಾಲಾ ಕಾಲೇಜುಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಶಕ್ತಿಯೋಜನೆ ಜಾರಿಯೂ ಇದಕ್ಕೆ ಕಾರಣವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಬಸ್‌ಪಾಸ್ ನೀಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಾರ್ಗಗಳಲ್ಲಿ ಹೆಚ್ಚು ಬಸ್ಸನ್ನು ಸಂಚಾರಕ್ಕೆ ಬಿಡಬೇಕು ಎಂದರು.
ಹಾಗೆಯೇ ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆಯಲ್ಲಿ ವಿಳಂಬವಾಗುತ್ತಿದೆ. ವಿದ್ಯಾರ್ಥಿ ವೇತನವನ್ನು ನೀಡುತ್ತಿಲ್ಲ. ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಹಾಕಿ ಕಾಯುತ್ತಿದ್ದಾರೆ. ಕಾಲೇಜುಗಳು ಆರಂಭವಾಗಿವೆ. ಸಾವಿರಾರು ವಿದ್ಯಾರ್ಥಿಗಳು ರಾಜ್ಯದ ಹಾಸ್ಟೆಲ್‌ಗಳಲ್ಲಿ ಪ್ರವೇಶ ಪಡೆಯಬೇಕಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅತ್ಯಂತ ಕಷ್ಟವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಲೋಹಿತ್ ಬಿ.ಹೆಚ್., ಪುನೀತ್ ಕೆ.ವೈ., ಅಭಿಷೇಕ್ ಬಿ., ಇದ್ದರು.