ಶಿವಮೊಗ್ಗ : ರಾಜ್ಯದಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆದ ವೈದ್ಯರ ಮುಷ್ಕರ ನಮ್ಮೆಲ್ಲರ ಕಣ್ಣು ತೆರೆಸಿದ್ದು, ಮುಷ್ಕರದ ಸಂದರ್ಭದಲ್ಲಿ ಮೃತಪಟ್ಟ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಯಾಗುವ ಅಗತ್ಯವಿದೆ ಎಂದು ವಿಧಾನಪರಿಷತ್‌ನ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಆರ್.ಕೆ. ಸಿದ್ಧರಾಮಣ್ಣ ಹೇಳಿದರು.
ಇಂದು ನಗರದ ಬಿಜೆಪಿ ಕಾರ್ಯಾ ಲಯದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆ ಗಳಿಂದ ಮತ್ತು ನರ್ಸಿಂಗ್ ಹೋಂಗಳಿಂದ ಜನಸಾಮಾನ್ಯರ ಮೇಲೆ ಆಗುತ್ತಿರುವ ಶೋಷಣೆಗೆ ಕಡಿವಾಣ ಹಾಕುವುದು ಅಗತ್ಯ. ಆದರೆ ಇದರ ಹೆಸರಿನಲ್ಲಿ ವೈದ್ಯರನ್ನು ಜೈಲಿಗಟ್ಟುವಂತಹ ಕಾನೂನನ್ನು ಜಾರಿಗೆ ತರುವುದು ಸರಿಯಲ್ಲ ಎಂದರು.
ಕಾಯ್ದೆಯಲ್ಲಿರುವ ಲೋಪವನ್ನು ಅರಿತು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರ ಪ್ಪನವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದೇ ದಿನದಲ್ಲಿ ಕಾಯ್ದೆಯನ್ನು ತೆಗೆದುಹಾಕ ಲಾಗುವುದು ಎಂದು ಹೇಳಿದ್ದಾರೆ. ಖಾಸಗಿ ಆಸ್ಪತ್ರೆಗಳಿಂದ ಜನಸಾಮಾನ್ಯರ ಮೇಲೆ ಆಗುತ್ತಿರುವ ಶೋಷಣೆ ತಪ್ಪಿಸಬೇಕು. ಇದಕ್ಕೆ ಒಂದಿಷ್ಟು ನಿಯಮಗಳ ಅವಶ್ಯಕತೆಯಿದೆ. ಆದ್ದರಿಂದ ಕಾಯ್ದೆಯಲ್ಲಿನ ಲೋಪ ಸರಿಪಡಿಸಬೇಕಾಗಿದೆ ಎಂದರು.
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವೈದ್ಯರ ಪ್ರತಿಭಟನೆ ಸಂದರ್ಭದಲ್ಲಿ ಆಗಿರುವ ಸಾವಿನ ಬಗ್ಗೆ ದೂರು ಕೊಟ್ಟರೆ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದ್ದಾರೆ, ಇದು ಅವರ ಉದ್ಧಟತನ ಹಾಗೂ ಬೇಜವಾ ಬ್ದಾರಿತನ ತೋರಿಸುತ್ತದೆ. ಆಗಿರುವ ಸಾವಿನ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.
ಪ್ರಸ್ತುತ ರಾಜ್ಯದಲ್ಲಿ ಪರಿವರ್ತನಾ ಯಾತ್ರೆ ನಡೆಯುತ್ತಿದೆ. ಇದಕ್ಕೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ಗುಜರಾತ್‌ನಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದೆ. ಅಲ್ಲಿಯೂ ಸಹ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಸಹಿಸದೇ ಕಾಂಗ್ರೆಸ್‌ನ ಯುವ ನಾಯಕ ರಾಹುಲ್‌ಗಾಂಧಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಜಿಎಸ್‌ಟಿ ಹಾಗೂ ಅಮಾನ್ಯೀಕರಣ ವಿಷ ಯದ ಬಗ್ಗೆ ರಾಹುಲ್ ಅಪಪ್ರಚಾರ ಮಾಡು ತ್ತಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಅಲ್ಲೋಲ ಕಲ್ಲೋಲ ಆಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ವಿಶ್ವದ ಎಲ್ಲಾ ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿಯ ಬಗ್ಗೆ ವರದಿ ನೀಡುವ ಮೂಡಿ ಸಂಸ್ಥೆ ಭಾರತದ ಆರ್ಥಿಕ ಪರಿಸ್ಥಿತಿ ಮೇಲ್ಮಟ್ಟ ಕ್ಕೇರಿದೆ ಎಂದು ವರದಿ ನೀಡಿದು, ಇದು ಮೋದಿಯವರ ಆಡಳಿತ ವೈಖರಿಗೆ ಸಾಕ್ಷಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ಆಯನೂರು ಮಂಜುನಾಥ್, ಶಾಸಕ ಬಿ.ವೈ.ರಾಘವೇಂದ್ರ, ಮಾಜಿ ಶಾಸಕರುಗಳಾದ ಹರತಾಳು ಹಾಲಪ್ಪ, ಬಿ.ಸ್ವಾಮಿರಾವ, ಗೋಪಾಲಕೃಷ್ಣ ಬೇಳೂರು, ಕೆ.ಜಿ. ಕುಮಾರಸ್ವಾಮಿ, ಕುಮಾರ್ ಬಂಗಾರಪ್ಪ ಮೊದಲಾದವರಿದ್ದರು.