ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಹಾವಳಿ ನಡುವೆ ಈಗ ಜಿಲ್ಲೆಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ರಾಜ್ಯದಲ್ಲಿ ಮೊದಲ ಸಾವು ವರದಿಯಾಗಿದೆ. ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್(72) ಎಂಬುವವರು ಇಲಿ ಜ್ವರಕ್ಕೆ ಬಲಿಯಾಗಿದ್ದಾರೆ.
ವೃದ್ಧ ಕಿಡ್ನಿ ವೈಫಲ್ಯದೊಂದಿಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 2 ದಿನ ಚಿಕಿತ್ಸೆ ಪಡೆದ ನಂತರ ವೃದ್ಧ ಮೃತಪಟ್ಟಿದ್ದಾರೆ.
ಕಳೆದ 15 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಉಮೇಶ್ ಅವರು ಹಾವೇರಿ, ಮಂಗಳೂರು ಸೇರಿ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇಲಿ ಜ್ವರದ ಜೊತೆ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ವೃದ್ಧ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಇಲಿ ಜ್ವರದ ಲಕ್ಷಣಗಳು:
ಕೆಲವರಲ್ಲಿ ಸಾಮಾನ್ಯ ಲಕ್ಷಣಗಳು ಕಂಡು ಬಂದರೆ, ಕೆಲವರಿಗೆ ಯಾವುದೇ ರೋಗಲಕ್ಷಣಗಳಿಲ್ಲದಿರಬಹುದು.
- ವಾಕರಿಕೆ ಮತ್ತು ವಾಂತಿ
- ಹೊಟ್ಟೆ ನೋವು
- ಅತಿಸಾರ
- ತಲೆನೋವು
- ತುಂಬಾ ಜ್ವರ
- ಕಾಮಾಲೆ
- ಕೆಂಪು ಕಣ್ಣುಗಳು