ಸಮಾರೋಪ ಯಶಸ್ವಿಗೆ ಎಲ್ಲರ ಸಹಕಾರವೇ ಕಾರಣ : ಆರ್‌ಎಂಎಂ

ಶಿವಮೊಗ್ಗ: ಸಹಕಾರಿ ಸಮಾರೋಪ ಹಬ್ಬ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲ ಸಹಕಾರಿಗಳಿಗೂ ಅಭಿನಂದನೆಗಳು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೬೫ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಗರದಲ್ಲಿ ಯಶಸ್ವಿಯಾಗಿ ನಡೆಯಿತು. ಸಚಿವರು ಸೇರಿದಂತೆ ಎಲ್ಲ ಸಹಕಾರಿಗಳು, ಮುಖಂಡರು, ವಿವಿಧ ಸಹಕಾರಿ ಸಂಸ್ಥೆಗಳ ಪದಾಧಿಕಾರಿಗಳು ಸೇರಿ ಸಮಾರಂಭವನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಿದ್ದಾರೆ. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ತುಂಬಾ ಸುಂದರವಾಗಿ ಮೂಡಿಬಂದಿವೆ. ಒಟ್ಟಾರೆ ಬಹುದಿನಗಳ ಕಾಲ ನೆನಪಿನಲ್ಲಿ ಉಳಿಯುವ ಕಾರ್ಯಕ್ರಮ ಇದಾಗಿದೆ ಎಂದರು.
ಕರ್ನಾಟಕ ರಾಜ್ಯಸೌಹಾದ ಸಹಕಾರಿ ಅಧ್ಯಕ್ಷ ಬಿ.ಹೆಚ್.ಕೃಷ್ಣಾರೆಡ್ಡಿ ಮತ್ತು ಎಲ್ಲ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲ ಸಹಕಾರಿ ಧುರೀಣರು ಇದರಲ್ಲಿ ಪಾಲ್ಗೊಂಡಿದ್ದರು. ಉಪನ್ಯಾಸಗಳು ನಡೆದವು. ಒಟ್ಟಾರೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು.
ಇಂದು ಸಂಜೆ ಕೂಡ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರೆಯಲಿವೆ. ೫.೩೦ಕ್ಕೆ ಪ್ರಹ್ಲಾದ್ ಮತ್ತು ಸಂಗಡಿಗರಿಂದ ಸುಗಮ ಸಂಗೀತ, ಸಂಜೆ ೬.೩೦ಕ್ಕೆ ಮನು ಕೇಂದ್ರದ ವಿದ್ಯಾರ್ಥಿಗಳಿಂದ ನೃತ್ಯ, ೭.೩೦ಕ್ಕೆ ಸುಧಾ ಬರಗೂರು ತಂಡದಿಂದ ಹರಟೆ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ೫೦ ಕ್ಕೂ ಹೆಚ್ಚು ಸ್ಟಾಲ್‌ಗಳು ಇದ್ದು, ಸಹಕಾರಿಗಳು ಇಂದು ಕೂಡ ಕಾರ್ಯಕ್ರಮಕ್ಕೆ ಹಾಜರಾಗಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ದುಗ್ಗಪ್ಪ ಗೌಡ, ಪಿ. ವೀರಮ್ಮ, ರಾಜಣ್ಣ, ಜಿ.ಎನ್.ಸುಧೀರ್, ಸುರೇಶ್ ಇದ್ದರು.