ಶಿವಮೊಗ್ಗ : ೨೦೨೪-೨೫ ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಹಾಗೂ ಬೆಳಗಳ ಘೋಷಣೆ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಜು.೨೩ ರಂದು ಶುಕ್ರವಾರ ತಮ್ಮ ಕಚೇರಿಯಲ್ಲಿ ೨೦೨೪ ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಬೆಳೆ ಸಮೀಕ್ಷೆ ಕುರಿತು ಕರೆದಿದ್ದ ಸಭೆಯಲ್ಲಿ ಬೆಳೆ ವಿಮೆ ಕರಪತ್ರಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ(ಮಳೆ ಆಶ್ರಿತ) ಹಾಗೂ ಜೋಳ (ಮಳೆಆಶ್ರಿತ) ಮತ್ತು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ (ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಮದ ಆಯ್ಕೆಯಾದ ಓರಿಯಂಟಲ್ ಜನರಲ್ ಇನ್ಶೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು.
ಬೆಳೆ ವಿಮೆಗಾಗಿ ನೋಂದಾಯಿಸಲು ಅಂತಿಮ ದಿನಾಂಕದ ಒಳಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿದರು.