ಅಪಘಾತದಲ್ಲಿ ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡಲು ಮನವಿ

ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ಹಾಗೂ ತೀವ್ರವಾಗಿ ಗಾಯಗೊಂಡಿರುವ ಬಡ ಕೂಲಿ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಂಜಾರ ವಿದ್ಯಾರ್ಥಿ ಸಂಘದ ಜಿಲ್ಲಾ ಘಟಕದ ವತಿಯಿಂದ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಿಜಯಪುರ ಜಿಲ್ಲೆಯ ವಿಜಯ ಪುರ, ಬಸವನಬಾಗೇವಾಡಿ, ಇಂಡಿ ತಾಲ್ಲೂಕಿನ ವಿವಿಧ ತಾಂಡಗಳ ೨೧ ಜನ ಕೂಲಿ ಕಾರ್ಮಿಕರು ನೆರೆಯ ಮಹಾರಾಷ್ಟ್ರ ರಾಜ್ಯದ ಸತಾರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಜೊತೆಗೆ ೧೭ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡಿರುವ ಎಲ್ಲರೂ ಅತ್ಯಂತ ಕಡು ಬಡವರು, ನಿರಾಶ್ರಿ ತರು, ಜೀವನೋಪಾಯಕ್ಕಾಗಿ ಗುಳೆ ಹೋಗುವವರಾಗಿದ್ದಾರೆ. ಕುಟುಂಬಕ್ಕೆ ದಿಕ್ಕು ಇಲ್ಲದಂತಾಗಿದೆ. ಅಪಘಾತ ಸಂಭವಿಸಿ ನಾಲ್ಕು ದಿನ ಕಳೆದರೂ ರಾಜ್ಯ ಸರ್ಕಾರ ಪರಿಹಾರ ನೀಡದೇ ಇರುವುದು ಅವಮಾನೀಯ ಸಂಗತಿಯಾಗಿದೆ ಎಂದು ದೂರಿದರು.
ಮೃತಪಟ್ಟ ಕುಟುಂಬಕ್ಕೆ ತಲಾ ೧೦ ಲಕ್ಷ ರೂ. ಹಾಗೂ ಗಾಯಗೊಂಡ ವರಿಗೆ ತಲಾ ೫ ಲಕ್ಷ ರೂ.ಗಳಂತೆ ಮುಖ್ಯಮಂತ್ರಿಗಳ ವಿಶೇಷ ಪರಿ ಹಾರ ನಿಧಿಯಿಂದ ನೀಡಬೇಕು. ತೀವ್ರ ವಾಗಿ ಗಾಯಗೊಂಡಿರುವವರಿಗೆ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಬೇಕು. ಅಪಘಾತದಲ್ಲಿ ಮೃತ ಪಟ್ಟ ಅನಾಥವಾಗಿರುವ ಕುಟುಂಬ ದವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚ ವನ್ನು ರಾಜ್ಯ ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸಿದರು.

SHARE
Previous article13 APR 2018
Next article13 APR 2018

LEAVE A REPLY

Please enter your comment!
Please enter your name here