Saturday, October 12, 2024
Google search engine
Homeಇ-ಪತ್ರಿಕೆಡಿಕೆಶಿಯಿಂದ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಮನವಿ

ಡಿಕೆಶಿಯಿಂದ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣಕ್ಕೆ ಮನವಿ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಶಾಸಕ ಇಕ್ಬಾಲ್‌ ಹುಸೇನ್‌ ಅವರನ್ನೋಳಗೊಂಡಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗವು ಮನವಿ ಸಲ್ಲಿಸಿದೆ.

ಹಾಗೂ ಮೊದಲಾದವರು ಇಂದು ನನ್ನ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ವಿಧಾನಸೌಧದಲ್ಲಿ ಭೇಟಿಯಾಗಿ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಿದೆವು.

ಸಿಎಂ ಅವರೂ ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದರು. ರಾಮನಗರವು ಮೊದಲು ಬೆಂಗಳೂರು ಜಿಲ್ಲೆಯಲ್ಲೇ ಇತ್ತು. ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು. ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ.

ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ. ಬಳಿಕ ಹೆಸರು ಬದಲಾವಣೆ ಆಗಲಿದೆ. ಈಗಿರುವ ರಾಮನಗರವೇ ಹೆಡ್ ಕ್ವಾರ್ಟರ್ ಆಗಿರಲಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಬೆಂಗಳೂರು ದಕ್ಷಿಣದ ವ್ಯಾಪ್ತಿಗೆ ಸೇರಲಿವೆ. ಈ ವಿಚಾರವನ್ನು ಕ್ಯಾಬಿನೆಟ್‌ನಲ್ಲಿಟ್ಟು ಚರ್ಚೆ ಮಾಡಲಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್,  ಮಾಜಿ ಸಂಸದ ಡಿಕೆ ಸುರೇಶ್‌ ಹಾಗೂ ಹಾಗೂ ಶಾಸಕ ಇಕ್ಬಾಲ್‌ ಹುಸೇನ್‌ ಸೇರಿದಂತೆ ಶಾಸಕರ ನಿಯೋಗವು ವಿಧಾನಸೌಧದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಈ ವೇಳೆ ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಮತ್ತು ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಬೇಕೆಂಬ ಮನವಿಯನ್ನು ಸಲ್ಲಿಸಿ. ಈ ಮನವಿಗೆ ಸಿಎಂ ಸಿದ್ದರಾಮಯ್ಯ ಕೂಡಾ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments