Sunday, October 13, 2024
Google search engine
Homeಅಂಕಣಗಳುಲೇಖನಗಳುಕೋಮುವಾದಿ ಕೋವಿಡ್ ಹರಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ

ಕೋಮುವಾದಿ ಕೋವಿಡ್ ಹರಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹ

ಶಿವಮೊಗ್ಗ : ಕೋಮುವಾದಿ ಕೋವಿಡ್ ಹರಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ. ಮೊಹಮ್ಮದ್ ಆರೀಫ್ ವುಲ್ಲಾ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಮತ್ತು ರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಕೆಲವು ಬಿಜೆಪಿ ಶಾಸಕರು ಬೆಂಗಳೂರಿನ ಬೆಡ್ ಬ್ಲಾಕಿಂಗ್ ಅಕ್ರಮಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಂಘಟನೆಯನ್ನು ಮುಂದೆ ತರುತ್ತಿರುವುದು ಮತ್ತು ಇದಕ್ಕೆ ಕೋಮು ಬಣ್ಣವನ್ನು ಹಚ್ಚುತ್ತಿರುವುದು ತುಂಬಾ ಅಪಾಯಕಾರಿಯಾಗಿದೆ. ನಿಜಕ್ಕೂ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಯಾರೇ ಶಾಮೀಲಾಗಿರಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಆದರೆ, ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಪ್ರತಿಬಿಂಬಿಸುತ್ತಿರುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಬೆಡ್ ಬ್ಲಾಕಿಂಗ್ ಅಕ್ರಮದ ಹಿಂದೆ ಮುಸ್ಲಿಂ ಸಂಘಟನೆ ಕೈವಾಡವಿದೆ ಎಂದು ಹೇಳಿದ್ದಾರೆ. ಕೆಲವರಿಗೆ ಕೆಟ್ಟ ಮೇಲೆ ಬುದ್ಧಿ ಬರುತ್ತದೆ. ಆದರೆ, ಈಶ್ವರಪ್ಪನಂತಹವರಿಗೆ ಕೆಟ್ಟ ಮೇಲೆಯೂ ಬುದ್ಧಿ ಬರುವುದಿಲ್ಲ. ಈ ದಂಧೆಯಲ್ಲಿ ಬಂಧನವಾದ ನೇತ್ರಾವತಿ, ರೋಹಿತ್ ಕುಮಾರ್ ಮತ್ತು ಶಶಿ ಎಂಬುವವರ ಹೆಸರನ್ನು ತೇಜಸ್ವಿ ಸೂರ್ಯ ಏಕೆ ಹೇಳಲಿಲ್ಲ? 205 ಜನರಲ್ಲಿ ಕೇವಲ 17 ಜನ ಮುಸ್ಲಿಮರ ಹೆಸರು ಮಾತ್ರ ಅವರ ಕಣ ್ಣಗೆ ಬಿತ್ತೆ? ಅಷ್ಟಕ್ಕೂ ತೇಜಸ್ವಿ ಸೂರ್ಯ ಯಾರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂಬುವುದು ಅವರಿಗೇ ಗೊತ್ತಿಲ್ಲ. ಈ ಏಜೆನ್ಸಿಗೆ ವಹಿಸಿದ್ದು ಬಿಜೆಪಿ ಸರ್ಕಾರ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಇದರ ಮುಖ್ಯಸ್ಥರು. ಹೀಗಿದ್ದು ಮುಖ್ಯಮಂತ್ರಿಗಳ ವಿರುದ್ಧವೇ ಆರೋಪ ಮಾಡಿದ ಹಾಗಾಗುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಅವರಿಗಿಲ್ಲ ಎಂದು ಟೀಕಿಸಿದ್ದಾರೆ.
ತೇಜಸ್ವಿ ಸೂರ್ಯ ತಾನೇನೋ ಬಹುದೊಡ್ಡ ಕೆಲಸ ಮಾಡಿದವರಂತೆ ಬಿಂಬಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಏನೂ ಅರಿಯದ ಮುಗ್ಧರು ಅವರನ್ನು ಕೊಂಡಾಡುತ್ತಿದ್ದಾರೆ. ಆದರೆ, ಕೇವಲ 17 ಜನ ಮುಸ್ಲಿಮರ ಹೆಸರನ್ನು ತೆಗೆದುಕೊಳ್ಳುವುದರಲ್ಲಿ ಅರ್ಥವೆಲ್ಲಿದೆ? ಅಷ್ಟಕ್ಕೂ ಕೊರೊನಾ ವಾರಿಯರ್ಸ್ ಆಗಿ ಮುಸ್ಲಿಮರು ಇಲ್ಲವೇ? ಅವರೆಲ್ಲ ಕೆಲಸ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಇದೊಂದು ರೀತಿಯಲ್ಲಿ ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಹಾಕುವ ಪ್ರಯತ್ನವಾಗಿದೆ. ಮತ್ತು ಚಾಮರಾಜನಗರದಲ್ಲಿ ಕೋವಿಡ್ ಹತ್ಯೆಯಲ್ಲಿ 24 ಜೀವಗಳು ಹೋದವಲ್ಲ ಇದಕ್ಕೆ ಯಾರು ಹೊಣೆ? ಇವರು ಯಾವ ಧರ್ಮದವರು? ಸಾವಿನ ಮನೆಯಲ್ಲೂ ಗಳಎಳೆಯುವ ಇಂತಹ ಕೋಮುವಾದಿಗಳು ಇರುವ ತನಕ ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತಪ್ಪಿದ್ದಲ್ಲ ಎಂದು ಹೇಳಿದ್ದಾರೆ.
ಇಷ್ಟು ದಿನ ಆಕ್ಸಿಜನ್, ಬೆಡ್, ವೆಂಟಿಲೇಟರ್ ಇಲ್ಲದೇ ಜನ ಸಾಯುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ನೆರವು ಕೂಡ ಸಿಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಕೊರೋನಾ ನಿಯಂತ್ರಿಸಲು ಕ್ರಮಕೈಗೊಳ್ಳಬೇಕೆ ಹೊರತು ಧರ್ಮ ಧರ್ಮಗಳ ನಡುವೆ ಧರ್ಮರಾಜಕಾರಣ ಮಾಡಬಾರದು. ತಪ್ಪು ಯಾರೇ ಮಾಡಿರಲಿ ಶಿಕ್ಷೆಯಾಗಬೇಕೆನ್ನುವುದು ನಿಜ. ಆದರೆ, ಅದಕ್ಕೆ ಧರ್ಮದ ಬಣ್ಣ ಕಟ್ಟುವುದು ಮಾತ್ರ ತುಂಬಾ ಅಪಾಯಕಾರಿ ಬೆಳವಣ ಗೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂತಹವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಬಿಜೆಪಿಯನ್ನೇ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ಇದರ ಹಿಂದೆ ಇದೆ ಎಂದು ಅವರು ಹೇಳಿದ್ದಾರೆ.
ಸರ್ಕಾರ ಈ ಕೂಡಲೇ ಕೋವಿಡ್ ನಿಯಂತ್ರಿಸುವತ್ತ ಗಮನಹರಿಸಬೇಕು. ಆಮ್ಲಜನಕ ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಕೋವಿಡ್ ಅಲೆ ಮುಂದಿನ ದಿನಗಳಲ್ಲಿ ಅಪಾಯಕಾರಿಯಾಗಿ ಹಬ್ಬಿ ಜೀವ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಜನರ ಜೀವ ಮತ್ತು ಜೀವನ ಎರಡೂ ಮುಖ್ಯವಾಗಿದೆ. ಪಕ್ಷ, ಜಾತಿ, ಧರ್ಮ ಇವುಗಳನ್ನು ಮೀರಿ ನಾವು ಮಾನವೀಯತೆ ಬೆಳೆಸಿಕೊಳ್ಳಬೇಕಾಗಿದೆ. ಎಲ್ಲರೂ ಒಟ್ಟಾಗಿ ಕೊರೋನಾ ತಡೆಯಲು ಮಾರ್ಗ ಹುಡುಕಬೇಕು ಎಂದು ಅವರು ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments