ಶಿಕಾರಿಪುರ: ಇಂದು ತಾಲ್ಲೂಕಿನ ತರಲಘಟ್ಟ ಹತ್ತಿರ ತಡ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಯುವಕರು ಸಾವನ್ನಪ್ಪಿದ್ದಾರೆ.
ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಮೂರು ಯುವಕರು ಮೃತಪಟ್ಟಿದ್ದಾರೆ.
ಶಿವಮೊಗ್ಗದಿಂದ ಸಂಚಾರಿಸುತ್ತಿದ್ದ ಮಾಸೂರು ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್ ಮತ್ತು ಶಿಕಾರಿಪುರದಿಂದ ಬರುತ್ತಿದ್ದ ಬೈಕ್ ನಡುವೆ ಮುಖಮುಖಿ ಡಿಕ್ಕಿ ಉಂಟಾಗಿದೆ. ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸಂತ್ರಸ್ತರನ್ನು ದಾವಣಗೆರೆ ಜಿಲ್ಲೆಯ ಹಳೆಜೋಗ ಗ್ರಾಮದ ಪ್ರಸನ್ನ(27), ಕಾರ್ತಿಕ್(27) , ಅಜಯ್ (25) ಎಂದು ಗುರುತಿಸಲಾಗಿದೆ. ಘಟನೆಗೆ ಅತಿವೇಗದ ಚಾಲನೆಯೇ ಕಾರಣವೆಂದು ಹೇಳಲಾಗಿದೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.