Thursday, December 5, 2024
Google search engine
Homeಇ-ಪತ್ರಿಕೆಶಿವಮೊಗ್ಗ: ಮಳೆ ನಡುವೆ ಗ್ರಾ.ಪಂ. ಸ್ವಚ್ಛವಾಹಿನಿ ಸಂಘದಿಂದ ಪ್ರತಿಭಟನಾ ಮೆರವಣಿಗೆ

ಶಿವಮೊಗ್ಗ: ಮಳೆ ನಡುವೆ ಗ್ರಾ.ಪಂ. ಸ್ವಚ್ಛವಾಹಿನಿ ಸಂಘದಿಂದ ಪ್ರತಿಭಟನಾ ಮೆರವಣಿಗೆ

ಶಿವಮೊಗ್ಗ: ತರಬೇತಿ ಪಡೆದ ಸ್ವಚ್ಛತಾ ವಾಹಿನಿ ನೌಕರರಿಗೆ ಗ್ರಾ.ಪಂ.ಗಳಲ್ಲಿ ಕೆಲಸ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾ.ಪಂ.ಸ್ವಚ್ಛವಾಹಿನಿ ಆಟೋ ಚಾಲಕರು ಹಾಗೂ ಸಹಾಯಕಿಯರ ಸಂಘದ ಜಿಲ್ಲಾ ಶಾಖೆ ವತಿಯಿಂದ ಇಂದು ಗಾಂಧಿ ಪಾರ್ಕ್‌ನಿಂದ ಪ್ರತಿಭಟನಾ ಮೆರವಣಿಗೆ ನಡೆದ ಜಿಲ್ಲಾ ಪಂಚಾಯತ್ ಎದುರು ಧರಣಿ ಸತ್ಯಾಗ್ರಹ ನಡೆಸಿ ಸಿ.ಇ.ಓ. ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸ್ವಚ್ಛವಾಹಿನಿ ಮಹಿಳಾ ಕಾರ್ಮಿಕರು ಕಸ ವಿಲೇವಾರಿ ಮಾಡುವುದರಲ್ಲಿ ಪ್ರಮುಖರಾಗಿದ್ದು, ಕಸವನ್ನು ಬೇರ್ಪಡಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದಾಗಿ ಸರ್ಕಾರದ ಪ್ರಮುಖ ಅಭಿಯಾನವಾದ ಸ್ವಚ್ಛ ಭಾರತ್ ಅಭಿಯಾನ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವುದಾಗಿ ಕೇಂದ್ರ ಸರ್ಕಾರ ಉಲ್ಲೇಖ ಮಾಡಿದೆ.ಗ್ರಾಮಗಳ ಸ್ವಚ್ಛತೆಯ ಜವಾಬ್ದಾರಿವಹಿಸಿರುವಂತಹ ಸ್ವಚ್ಛ ವಾಹಿನಿ ನೌಕರರಿಗೆ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಪ್ರತಿಭಟನಾಕರರು ಆರೋಪಿಸಿದರು.

ರಾಜ್ಯ ಸರ್ಕಾರದಿಂದ ತರಬೇತಿ ಪಡೆದ ಸ್ವಚ್ಛ ವಾಹಿನಿ ನೌಕರರಿಗೆ ಗ್ರಾ.ಪಂ.ಗಳಲ್ಲಿ ಕೆಲಸ ನೀಡುತ್ತಿಲ್ಲ. ಸ್ವಚ್ಛ ವಾಹಿನಿ ಗಾಡಿಗಳಿಗೆ ವಿಮೆ ನವೀಕರಣ ಮಾಡಿಲ್ಲ. ಬೇಟಿ ಬಜಾವೋ, ಬೇಟಿ ಪಡಾವೋ ಎನ್ನುವ ಕೇಂದ್ರ ಸರ್ಕಾರವು ಜೀವದ ಹಂಗನ್ನು ತೊರೆದು ಸ್ವಚ್ಛತಾ ಕೆಲಸ ಮಾಡುತ್ತಿರುವ ಮಹಿಳಾ ನೌಕರರಿಗೆ ವೇತನ ಬಾಕಿ ಉಳಿಸಿಕೊಂಡಿದೆ. ಸ್ವಚ್ಚತಾ ಸಿಬ್ಬಂದಿಗಳಿಗೆ ರಕ್ಷಣಾ ಸಲಕರಣಿಗಳನ್ನು ಒದಗಿಸುತ್ತಿಲ್ಲ. ಇದರಿಂದಾಗಿ ನೌಕರರು ಸಾಂಕ್ರಾಮಿಕ ರೋಗಿಗಳಿಗೆ ತುತ್ತಾಗುತ್ತಿದ್ದಾರೆ ಎಂದು ದೂರಿದರು.

ಸ್ವಚ್ಛತಾ ವಾಹಿನಿ ಗಾಡಿಗಳಿಗೆ ವಿಮೆ ನವೀಕರಣ ಮಾಡಬೇಕು. ನೌಕರರನ್ನು ಗ್ರಾ.ಪಂ. ನೌಕರರೆಂದು ಪರಿಗಣಿಸಿ ಗ್ರಾ.ಪಂ. ನೌಕರರಿಗೆ ನೀಡುವ ಸೌಲಭ್ಯ ಜಾರಿಯಾಗಬೇಕು. ರಕ್ಷಣಾ ಸಲಕರಣೆಗಳನ್ನು ಒದಗಿಸಬೇಕು. ಸ್ವಚ್ಛತಾ ವಾಹಿನಿ ಮಹಿಳಾ ಸಿಬ್ಬಂದಿಗಳಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಆರೋಗ್ಯ ವಿಮೆ ಜಾರಿಯಾಗಬೇಕು. ತರಬೇತಿ ಪಡೆದ ಮಹಿಳಾ ಚಾಲಕರುಗಳಿಗೆ ಮಾತ್ರ ಆಟೋ ನೀಡಬೇಕು. ಗ್ರಾ.ಪಂ.ಗಳಲ್ಲಿ ಕೆಟ್ಟು ನಿಂತಿರುವ ಆಟೋಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಸೇರಿದಂತೆ ನಮ್ಮ ಎಲ್ಲಾ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಸಂಚಾಲಕ ಡಿ.ಎಂ.ಮರಿಯಪ್ಪ, ಮುಖಂಡರಾದ ಹನುಮಮ್ಮ, ಎಂ. ನಾರಾಯಣ್, ಮುನಿರಾಜು, ಕುಸುಮಬಾಯಿ ಇನ್ನಿತರರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular

Recent Comments