Thursday, December 12, 2024
Google search engine
Homeಇ-ಪತ್ರಿಕೆಶಿವಮೊಗ್ಗ: ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ: ಡಾ.ಆರತಿ ಕೃಷ್ಣ

ಶಿವಮೊಗ್ಗ: ಅನಿವಾಸಿ ಕನ್ನಡಿಗರ ಸಮಸ್ಯೆಗಳ ಸ್ಪಂದನೆಗೆ ಪ್ರತ್ಯೇಕ ಸಚಿವಾಲಯಕ್ಕೆ ಮನವಿ: ಡಾ.ಆರತಿ ಕೃಷ್ಣ

ಶಿವಮೊಗ್ಗ:  ಅನಿವಾಸಿ ಕನ್ನಡಿಗರ ಅವಶ್ಯಕತೆಗಳು-ಸಮಸ್ಯೆಗಳಿಗೆ ಸ್ಪಂದಿಸಲು ಪ್ರತ್ಯೇಕವಾದ ಒಂದು ಸಚಿವಾಲಯ ಪ್ರಾರಂಭಿಸಲು ಸರ್ಕಾರಕ್ಕೆ ಪ್ರಣಾಳಿಕೆ ಸಲ್ಲಿಸಲಾಗಿದ್ದು, ಈ ಕುರಿತು ನೀತಿ-ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಎಂದು  ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದರು.

ಜು.12 ರಂದು ಜಿಲ್ಲೆಯ ಅನಿವಾಸಿ ಕನ್ನಡಿಗರು ಹಾಗೂ ಕುಟುಂಬದವರಿಂದ ಅಹವಾಲು/ದೂರುಗಳನ್ನು ಸ್ವೀಕರಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭದ್ರಾವತಿ, ತೀರ್ಥಹಳ್ಳಿಯಿಂದಲೂ ಹೆಚ್ಚಿನ ಜನರು ದುಡಿಯುವ ಉದ್ದೇಶಗಳಿಗೆ ಕಾಂಬೋಡಿಯಾ, ವಿಯೆಟ್ನಾಂ ಇತರೆ ಬೇರೆ ದೇಶಗಳಿಗೆ ತೆರಳಿ ಸವಾಲುಗಳನ್ನು ಎದುರಿಸುತ್ತಾರೆ. ವಿದೇಶದಲ್ಲಿ ಮರಣ ಹೊಂದಿದವರ ಶವವನ್ನು ಇಲ್ಲಿಗೆ ತರಲು ಕರೆ ಮಾಡುತ್ತಾರೆ. ಕೋವಿಡ್, ಇತರೆ ಸಂಕಷ್ಟದ ಸಮಯದಲ್ಲಿ ಅನಿವಾಸಿ ಕನ್ನಡಿಗರಿಗೆ ಸಹಾಯ ಮಾಡಲಾಗಿದೆ. ವಿದೇಶದಿಂದ ಹಿಂದುರಿಗದವರಿಗೆ ಇಲ್ಲಿ ಬಂದ ಮೇಲೆ ಅನೇಕ ರೀತಿಯ ಸಮಸ್ಯೆ ಕೂಡ ಎದುರಾಗಿದೆ.    ವಿದೇಶಕ್ಕೆ ತೆರಳುವವರು ಸಮಿತಿಯ ಕಚೇರಿಯಲ್ಲಿ ನೋಂದಣಿ ಮಾಡಿಕೊಂಡರೆ, ಅವರಿಗೆ ಸಹಾಯ ಮಾಡುವುದು ಸುಲಭವಾಗುತ್ತದೆ. ಆದ್ದರಿಂದ ಹೊರ ದೇಶಗಳಿಗೆ ತೆರಳುವ ಮುನ್ನ ನೋಂದಣಿ ಮಾಡಿಸಿಕೊಳ್ಳಬೇಕು. ಅನಿವಾಸಿಯರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಬೆಂಗಳೂರಿಗೆ ಬರಲು ಕಷ್ಟವಾದಲ್ಲಿ ತಾಲ್ಲೂಕುಗಳಲ್ಲಿ ತಹಶೀಲ್ದಾರ್, ಎಸಿ ಕಚೇರಿ, ಜಿಲ್ಲಾಡಳಿತಕ್ಕೆ ಸಹ ದೂರು ನೀಡಬಹುದು ಎಂದು ತಿಳಿಸಿದರು.

ಸಮಿತಿಯ ಸದಸ್ಯ ಕಾರ್ಯದಲರ್ಶಿ ಲಕ್ಷ್ಮಮ್ಮ ಪಿ ಮಾತನಾಡಿ, ವಿದೇಶಕ್ಕೆ ತೆರಳುವ ಭಾರತೀಯರು  ಏಜೆನ್ಸಿ ಅಧಿಕೃತವೋ ಅಲ್ಲವೋ ಎಂದು ವಿದೇಶಾಂಗ ಸಚಿವಾಲಯದ ಜಾಲತಾಣದಲ್ಲಿ ಪರಿಶೀಲಿಸಬೇಕು.  ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳು, ಕೆಲಸಗಾರರು ಸಮಿತಿ ಕಚೇರಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈ ಬಗ್ಗೆ ಅನೇಕರಿಗೆ ಅರಿವು ಇಲ್ಲ. ಜಿಲ್ಲಾಡಳಿತದ ಸಹಕಾರದಿಂದ ಈ ಕುರಿತು ಜಾಗೃತಿ ಕಾರ್ಯಕ್ರಮ ಮಾಡಲು ತಾವು ಸಿದ್ದ ಎಂದು ತಿಳಿಸಿದ ಅವರು ಸಮಿತಿಯ ಮುಖ್ಯ ಗುರಿ ಮತ್ತು ಉದ್ದೇಶಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ , ಎಎಸ್‍ಪಿ ಅನಿಲ್ ಕುಮಾರ್ ಭೂಮರಡ್ಡಿ, ಎಸಿ ಸತ್ಯನಾರಾಯಣ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್, ಇತರೆ ಅಧಿಕಾರಿಗಳು, ಅನಿವಾಸಿ ಕನ್ನಡಿಗರು ಹಾಜರಿದ್ದರು.

RELATED ARTICLES
- Advertisment -
Google search engine

Most Popular

Recent Comments