Saturday, October 12, 2024
Google search engine
Homeಇ-ಪತ್ರಿಕೆಯಡಿಯೂರಪ್ಪರಿಂದ ಶ್ರೀಜಗದ್ಗುರು ರಂಭಾಪುರೀಶ ನಿವಾಸ ಲೋಕಾರ್ಪಣೆ

ಯಡಿಯೂರಪ್ಪರಿಂದ ಶ್ರೀಜಗದ್ಗುರು ರಂಭಾಪುರೀಶ ನಿವಾಸ ಲೋಕಾರ್ಪಣೆ

ಶಿವಮೊಗ್ಗ: ಸಕಲ ಜೀವಾತ್ಮರಿಗೆ ಒಳಿತನ್ನು ಬಯಸುವುದೇ ನಿಜವಾದ ಧರ್ಮ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಇಂದು ನಗರದ ಹರಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಸಮಾಜದಲ್ಲಿ ಸಂಘಟನೆಗಳು ನಡೆಯಬೇಕೆ ವಿನಹ ಸಂಘರ್ಷಗಳು ಇರಬಾರದು, ಅರಿವು ಮತ್ತು ಮರೆವು ಎರಡೂ ಮನುಷ್ಯನಲ್ಲಿವೆ. ಅರಿವು ಜಾಗೃತಗೊಂಡಾಗ ಬದುಕು ವಿಕಾಸಗೊಳ್ಳುತ್ತದೆ. ಜೀವನದಲ್ಲಿ ಸುವರ್ಣ ಸಂಪಾದಿಸದಿದ್ದರೂ ಪರವಾಗಿಲ್ಲ. ಆದರೆ ಸದ್ಗುಣಗಳನ್ನು ಸಂಪಾದಿಸಿಕೊಳ್ಳಬೇಕು ಎಂದರು.

ಯುವ ಜನಾಂಗದಲ್ಲಿ ಅದ್ಭುತ ಶಕ್ತಿಯಿದೆ. ಧರ್ಮ ಮತ್ತು ದೇಶ ಕಟ್ಟಿ ಬೆಳೆಸುವುದರಲ್ಲಿ ಯುವ ಜನಾಂಗ ಶ್ರಮಿಸಿದರೆ ಬಹಳಷ್ಟು ಪ್ರಗತಿ ಸಾಧಿಸಲು ಸಾಧ್ಯವಿದೆ. ಶ್ರೀ ಪೀಠದ ಬಹು ದಿನಗಳ ಕನಸು ಇಂದು ನನಸಾದ ಸಂತೋಷ ನಮಗಿದೆ. ಭೂದಾನ ಮಾಡಿದ ಟಿ.ವಿ.ಈಶ್ವರಯ್ಯ ಸಹೋದರರ ಸೇವೆ ಅಮೂಲ್ಯವಾಗಿದೆ. ಭವಿಷ್ಯತ್ತಿನ ದಿನಗಳಲ್ಲಿ ಆದರ್ಶ ವಿದ್ಯಾಲಯ ಹುಟ್ಟು ಹಾಕುವ ಉದ್ದೇಶ ನಮಗಿದೆ ಎಂದರು.

ನೂತನ ಕಟ್ಟಡ ಉದ್ಘಾಟಿಸಿದ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾತನಾಡಿ ಭಾರತ ದೇಶ ಧರ್ಮ ಭೂಮಿ ಯೋಗ ಭೂಮಿ. ಈ ಭಾಗದಲ್ಲಿ ಶ್ರೀ ರಂಭಾಪುರಿ ಪೀಠದ ಗುರುನಿವಾಸ ನಿರ್ಮಾಣಗೊಂಡು ಉದ್ಘಾಟನೆಗೊಂಡಿದ್ದು ಭಕ್ತರೆಲ್ಲರ ಸೌಭಾಗ್ಯವಾಗಿದೆ ಎಂದರು.

ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ ಧರ್ಮ ಮತ್ತು ದೇಶ ಮನುಷ್ಯನ ಎರಡು ಕಣ್ಣು. ಪ್ರತಿಯೊಬ್ಬರಲ್ಲಿ ರಾಷ್ಟ್ರಾಭಿಮಾನ ಹಾಗೂ ಧರ್ಮಾಭಿಮಾನ ಬೆಳೆದುಕೊಂಡು ಬರಬೇಕಾಗಿದೆ ಎಂದರು.

ಸಮಾರಂಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಹಾಗೂ ಡಿ.ಎಸ್.ಅರುಣ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಚ್.ಎಂ.ಚಂದ್ರಶೇಖರಪ್ಪ, ಆಯನೂರು ಮಂಜುನಾಥ್, ವೈ.ಹೆಚ್.ನಾಗರಾಜ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಶ್ರೀ ಬ.ವೀ.ಲಿಂ.ಸೇವಾ ಸಮಾಜದ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್, ಅ.ಭಾ.ವೀ.ಲಿಂ. ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎಸ್.ಸಜ್ಜನ, ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ ಸಿ., ನಿರ್ಮಿತಿ ಕೇಂದ್ರದ ಯೋಜನ ವ್ಯವಸ್ಥಾಪಕ ನಾಗರಾಜ್ ಕೆ., ಶ್ರೀಮತಿ ಪಾರ್ವತಮ್ಮ ಪಂಚಾಕ್ಷರಯ್ಯ, ಹೆಚ್.ವಿ.ಮರುಳೇಶ ಪಾಲ್ಗೊಂಡಿದ್ದರು.

ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದರೆ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಮುಖ ವಹಿಸಿದ್ದರು. ಮಳಲಿ ಡಾ.ನಾಗಭೂಷಣ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶ್ರೀಗಳು, ಕಡೆನಂದಿಹಳ್ಳಿ ರೇವಣಸಿದ್ದೇಶ್ವರ ಶ್ರೀಗಳು, ಹಣ್ಣೆಮಠದ ಮರುಳಸಿದ್ಧ ಪಂಡಿತಾರಾಧ್ಯ ಶ್ರೀಗಳು, ಹುಣಸಘಟ್ಟದ ಗುರುಮೂರ್ತಿ ಶ್ರೀಗಳು, ಬೀರೂರು ರುದ್ರಮುನಿ ಶ್ರೀಗಳು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶ್ರೀಗಳು, ಚನ್ನಗಿರಿ ಡಾ| ಕೇದಾರ ಶಿವಶಾಂತವೀರ ಶ್ರೀಗಳು, ನಂದಿಪುರದ ನಂದೀಶ್ವರ ಶ್ರೀಗಳು, ರಟ್ಟಿಹಳ್ಳಿ ವಿಶ್ವೇಶ್ವರ ದೇವರು ಇದ್ದರು.

RELATED ARTICLES
- Advertisment -
Google search engine

Most Popular

Recent Comments