ಬೆಂಗಳೂರು: ಬೆಂಗಳೂರಿನ ಪಟ್ಟಣಗೆರೆಯಲ್ಲಿ ದರ್ಶನ್ ಮತ್ತು ಸಹಚರರಿಂದ ಕೊಲೆಗೀಡಾದ ರೇಣುಕಾಸ್ವಾಮಿ ಪೋಷಕರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದರು.
ಮುಖ್ಯಮಂತ್ರಿಗಳ ನಿವಾಸ ‘ಕಾವೇರಿ’ಗೆ ಆಗಮಿಸಿದ ಅವರು ತಮ್ಮ ಅಳಲು ತೋಡಿಕೊಂಡರು. ಮನೆಯಲ್ಲಿ ದುಡಿಯುತ್ತಿದ್ದ ಯುವಕ ಸಾವಿಗೀಡಾದ ಹಿನ್ನೆಲೆಯಲ್ಲಿ ತಮ್ಮ ಸೊಸೆಗೆ ಉದ್ಯೋಗ ನೀಡಬೇಕೆಂದು ವಿನಂತಿಸಿದರು.
ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ಅವರು ತಮ್ಮ ಮಗನ ಸಾವಿಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಹೇಳಿದರು. ತಮ್ಮ ಮಗಳಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ ಮಾಡಿದಾಗ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದರು.