Wednesday, July 24, 2024
Google search engine
Homeಇ-ಪತ್ರಿಕೆಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದಿಂದ ರಾಜ್ಯ ಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ

ಸಿನಿಮೊಗೆ-ಶಿವಮೊಗ್ಗ ಚಿತ್ರ ಸಮಾಜದಿಂದ ರಾಜ್ಯ ಮಟ್ಟದ ಅಂಬೆಗಾಲು-6 ಕಿರುಚಿತ್ರ ಸ್ಪರ್ಧೆ

ಮೊದಲ ಬಹುಮಾನ 50,000 ರೂ. ನಗದು

ಶಿವಮೊಗ್ಗ: ನಗರದ ಸಿನಿಮೊಗೆ – ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ ಇದೀಗ  ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ (ಶಾರ್ಟ್ ಫಿಲಂ) ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಬೆಳ್ಳಿಮಂಡಲದ ಕಾರ್ಯಧ್ಯಕ್ಷ ಹಾಗೂ  ಅಂಬೆಗಾಲು ಕಿರುಚಿತ್ರ ಸ್ಪರ್ಧೆಯ ಸಂಚಾಲಕ ಡಿ. ಎಸ್. ಅರುಣ್ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅಂಬೆಗಾಲು – 6 ಕಿರುಚಿತ್ರ ಸ್ಪರ್ಧೆಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಆರನೇ ವರ್ಷದಲ್ಲಿ ಈ ರಾಜ್ಯಮಟ್ಟದ ಅಂಬೆಗಾಲು -6 ಕಿರು ಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ರಾಜ್ಯದೆಲ್ಲೆಡೆಯಿಂದ ಶ್ರೇಷ್ಟ ಗುಣಮಟ್ಟದ ಕಿರು ಚಿತ್ರಗಳನ್ನು ನಿರೀಕ್ಷಿಸಲಾಗಿದೆ ಎಂದರು.

ಯುವಜನತೆಯಲ್ಲಿ ಚಲನಚಿತ್ರ  ಕುರಿತಾಗಿ ಅರಿವು ಮೂಡಿಸುವ ಹಾಗೂ ಅವರಲ್ಲಿನ ಸೃಜನಶೀಲತೆಯನ್ನು ಪ್ರೊತ್ಸಾಹಿಸುವ ದೃಷ್ಟಿಯಿಂದ ಈ ಕಿರುಚಿತ್ರ ಸ್ಪರ್ಧೆಯನ್ನು ಅಯೋಜಿಸಲಾಗಿದ್ದು,  ಶೀರ್ಷಿಕೆ ಹಾಗೂ ಟೈಟಲ್ ಕಾರ್ಡ್ ಸೇರಿ ೦೫ ರಿಂದ ೦೭ ನಿಮಿಷಗಳ ಕಿರುಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಬಹುದು ಎಂದ ಅವರು, ಮೊಬೈಲ್ ಸೇರಿದಂತೆ ಯಾವುದೇ ಕ್ಯಾಮರಾವನ್ನು ಬಳಸಿ ಚಿತ್ರೀಕರಿಸಬಹುದಾಗಿದ್ದು, ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಯಾವುದೇ ಮಾಧ್ಯಮಗಳಿಗಿಂದ ದೃಶ್ಯಗಳನ್ನು ಕಟ್ ಅಂಡ್ ಪೇಸ್ಟ್ ಆಗಲೀ, ಸಾಕ್ಷ್ಯಚಿತ್ರವನ್ನಾಗಲೀ ಅಥವಾ ಸಂಪೂರ್ಣ ಎನಿಮೇಷನ್ ಚಿತ್ರಗಳನ್ನಾಗಲೀ ಸ್ಪರ್ಧೆಗೆ ಕಳಿಸುವಂತಿಲ್ಲ. ಸಂಪೂರ್ಣವಾಗಿ ಸ್ವಂತಿಕೆಯ ನಿರ್ದೇಶನದ ಯಾವುದೇ ವಿಷಯವನ್ನು ಕುರಿತು ಕಿರು ಚಿತ್ರ ನಿರ್ಮಿಸಬಹುದು. ಹಾಸ್ಯ ಕಥಾನಕವುಳ್ಳ ಕಿರುಚಿತ್ರಗಳಿಗೆ ವಿಶೇಷ ಆದ್ಯತೆಯಿದೆ ಎಂದರು.

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರೂ. 50,೦೦೦ ರೂಗಳ ಪ್ರಥಮ ಬಹುಮಾನ, ರೂ. 30,೦೦೦.೦೦ ರೂ.ಗಳ ದ್ವಿತೀಯ ಬಹುಮಾನ ಜೊತೆಗೆ ಶ್ರೇಷ್ಟ ನಟ, ಶ್ರೇಷ್ಟ ನಟಿ, ಶ್ರೇಷ್ಟ ನಿರ್ದೇಶಕ, ಶ್ರೇಷ್ಟ ಕಥೆ-ಚಿತ್ರಕಥೆ, ಶ್ರೇಷ್ಟ ಛಾಯಾಗ್ರಹಣ, ಶ್ರೇಷ್ಟ ಸಂಗೀತ, ಶ್ರೇಷ್ಟ ಸಂಗೀತ ವಿಭಾಗಗಳಲ್ಲಿ ಹತ್ತು ಮಂದಿಗೆ ತಲಾ 5,೦೦೦ ನಗದು ಆಕರ್ಷಣೀಯ ಸ್ಮರಣಿಕೆಗಳಿವೆ. ಪ್ರಶಸ್ತಿ ಪುರಸ್ಕೃತರಿಗೆ ಅಕ್ಟೋಬರ್ ಮಾಸಾಂತ್ಯದಲ್ಲಿ,  ನಡೆಯುವ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಕಿರು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 1,೦೦೦ ರೂ.ಗಳ  ಪ್ರವೇಶ ಶುಲ್ಕವಿದ್ದು, ಅರ್ಜಿಗಳನ್ನು ಬಿ.ಹೆಚ್. ರಸ್ತೆಯ ದೀಪಕ್ ಪೆಟ್ರೋಲ್ ಬಂಕ್‌ನಲ್ಲಿ ಪಡೆದು,  ಭರ್ತಿ ಮಾಡಿ  ಜುಲೈ 31ರ ಒಳಗಾಗಿ ಸಲ್ಲಿಸಬಹುದು. ಕಿರು ಚಿತ್ರಗಳನ್ನು   ನಾಲ್ಕು ಹೆಚ್‌ಡಿ ಶ್ರೇಣಿಯ ಡಿವಿಡಿ ಸಹಿತ  ಆಗಸ್ಟ್  ೩೦, ೨೦೨೪ ಒಳಗಾಗಿ ಸಲ್ಲಿಸಬಹುದು. ಸ್ಪರ್ಧೆಯ ವಿವರಗಳಿಗೆ ವೈದ್ಯ ಸಂಚಾಲಕರು (೯೮೪೪೪ ೫೬೫೦೫), ಡಾ. ನಾಗಭೂಷಣ (೯೪೪೯೨ ೮೪೪೯೫) ಮಂಜುನಾಥ್ (೯೬೮೬೫ ೫೯೯೫೦)ರವರನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ  ಡಾ. ನಾಗಭೂಷಣ, ಜಿ. ವಿಜಯಕುಮಾರ್, ಕೆ. ಎಸ್. ಚೇತನ್, ಚೇತನ್ (ಶ್ರೀನಿಽ), ಆನಂದ, ಚಂದ್ರಶೇಖರ್, ಶಿವಾನಂದ್, ಸುಕುಮಾರ್, ಸಂತೋಷ್, ಮಂಜುನಾಥ್, ಶಿವು, ಎನ್. ಬಿ. ರವೀಶ, ಮೊದಲಾದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments