Saturday, October 12, 2024
Google search engine
Homeಇ-ಪತ್ರಿಕೆಮಾದಕ ವಸ್ತುಗಳಿಂದ ದೂರವಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಕರೆ

ಮಾದಕ ವಸ್ತುಗಳಿಂದ ದೂರವಿರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಕರೆ

ಶಿವಮೊಗ್ಗ: ಮಾದಕ ವಸ್ತುಗಳಿಂದ ದೂರವಿರಿ. ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಕರೆ ನೀಡಿದರು.

ಅವರು ಇಂದು ಜಿಲ್ಲಾ ಪೊಲೀಸ್ ಇಲಾಖೆ, ಕೋಟೆ ಪೊಲೀಸ್ ಠಾಣೆ. ಸಹ್ಯಾದ್ರಿ ಕಲಾ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ಯುವಕರು ಅದರಲ್ಲೂ ವಿದ್ಯಾರ್ಥಿಗಳು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಿದ್ದಾರೆ. ಕುತೂಹಲಕ್ಕಾಗಿ ಮಾದಕ ವಸ್ತುಗಳ ಚಟವನ್ನು ಅಂಟಿಸಿಕೊಂಡು ಅದಕ್ಕೆ ದಾಸರಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಹದಿಹರೆಯದವರಲ್ಲಿ ಈ ಸಮಸ್ಯೆ ಹೆಚ್ಚಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದೆ. ಯುವಕರು ಇದರಿಂದ ಹೊರ ಬರಬೇಕು. ಪೊಲೀಸ್ ಇಲಾಖೆಯ ಜೊತೆಗೆ ಪೋಷಕರು, ಶಿಕ್ಷಕರು, ಸಂಘ ಸಂಸ್ಥೆಗಳು ಹೀಗೆ ಎಲ್ಲರೂ ಸೇರಿ ಮಾದಕ ವಸ್ತುಗಳ ವಿರುದ್ಧ ಸಮರ ಸಾರಿದಾಗ ಮಾತ್ರ ಇದನ್ನು ತಡೆಯಲು ಸಾಧ್ಯ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸೈಯದ್ ಸನಾವುಲ್ಲಾ ವಹಿಸಿದ್ದರು.

ಕೋಟೆ ಪೊಲೀಸ್ ಠಾಣೆಯ ರವಿಕುಮಾರ್ ಅವರು ಪ್ರಾತ್ಯಕ್ಷಿಕೆ ಮೂಲಕ ಸೈಬರ್ ಅಪರಾಧಗಳು, ಇದರಿಂದ ಎಚ್ಚರಿಕೆ ವಹಿಸಬೇಕಾದ ಕ್ರಮಗಳು, ಮೊಬೈಲ್ ನ ಕೆಲವು ಆಪ್ ಗಳಿಂದ ಆಗುವ ತೊಂದರೆಗಳು, ಹಣ ಕದಿಯುವ ಜಾಲ ಮುಂತಾದ ವಿಷಯಗಳ ಕುರಿತಂತೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಡಿ.ವೈ.ಎಸ್.ಪಿ. ಬಾಬು ಅಂಜನಪ್ಪ, ಕೋಟೆ ಪೊಲೀಸ್ ಠಾಣೆಯ ಕೊಪ್ಪದ್ ಸಿ.ಆರ್. ಮುಂತಾದವರಿದ್ದರು. ಪ್ರಣತಿ ಪ್ರಾರ್ಥಿಸಿದರು.

RELATED ARTICLES
- Advertisment -
Google search engine

Most Popular

Recent Comments