Thursday, September 19, 2024
Google search engine
Homeಅಂಕಣಗಳುಲೇಖನಗಳುಕೇಂದ್ರದ ಯೋಜನೆಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ

ಕೇಂದ್ರದ ಯೋಜನೆಯಿಂದ ಬಲಿಷ್ಠ ರಾಷ್ಟ್ರ ನಿರ್ಮಾಣ

ಶಿವಮೊಗ್ಗ : ಕೇಂದ್ರ ಸರ್ಕಾರ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡುತ್ತಿದ್ದು, ಇದರಿಂದ ಬಲಿಷ್ಠ ರಾಷ್ಟ್ರ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ ಹೇಳಿದರು.
ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಪಕ್ಷದ ಕಾರ್ಯಕರ್ತರ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನೋಟ್‌ಬ್ಯಾನ್ ಮತ್ತು ಜಿಎಸ್‌ಟಿಯಂತಹ ಕಾರ್ಯವನ್ನು ಮಾಡುವ ಮೂಲಕ ಕೇಂದ್ರ ಸರ್ಕಾರ ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ ಎಂದರು.
ಜಿಎಸ್‌ಟಿ ಅನುಷ್ಠಾನಗೊಂಡು ಕೇವಲ ಎರಡು ತಿಂಗಳಲ್ಲೇ ಶೇ. ೧೯ರಷ್ಟು ಆದಾಯ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ವಸ್ತುಗಳು ತಲುಪಲು ೧೦-೧೨ ದಿನಗಳ ಕಾಲ ಸಮಯಾವಕಾಶ ತಗಲುತ್ತಿತ್ತು.ಇದೀಗ ಎರಡು ಮೂರು ದಿನಗಳಲ್ಲೇ ವಸ್ತುಗಳು ಸಿಗುವಂತಾಗಿದೆ ಎಂದು ಹೇಳಿದರು.
ಆದರೆ ಇದಕ್ಕೆ ಅಪವಾದವೆಂಬಂತೆ ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಇದೆ. ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ರಾಜ್ಯ ಸರ್ಕಾರದಿಂದ ಆಗುತ್ತಿಲ್ಲ. ಕೇವಲ ಪ್ಲೆಕ್ಸ್ ಹಾಗೂ ಜಾಹೀರಾತುಗಳ ಮೂಲಕ ಪ್ರಚಾರದ ಭರಾಟೆಯಲ್ಲಿ ಈ ಸರ್ಕಾರ ತೊಡಗಿದೆ ಎಂದು ದೂರಿದರು.
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವಂತಹ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಾಗಿದೆ. ಅಲ್ಲದೆ, ಈಗಾಗಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸೂಚನೆ ನೀಡಿರುವಂತೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವವರೆಗೆ ಯಾವೊಬ್ಬ ಕಾರ್ಯಕರ್ತನೂ ವಿಶ್ರಮಿಸದೇ ಹಗಲಿರುಳು ದುಡಿಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಆಯನೂರು ಮಂಜುನಾಥ್, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮುಖಂಡರುಗಳಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ದೇವದಾಸ್ ನಾಯಕ್, ಭಾರತೀ ಶೆಟ್ಟಿ ಮೊದಲಾದವರಿದ್ದರು.

RELATED ARTICLES
- Advertisment -
Google search engine

Most Popular

Recent Comments