ಶಿವಮೊಗ್ಗ: ನಗರದ ಪ್ರತಿಷ್ಠಿತ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ.ನಂದಕಿಶೋರ್ ಲಾಹೋಟಿ(67) ಅವರು ಇಂದು ನಿಧನರಾಗಿದ್ದಾರೆ.
ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತತಕ್ಷಣವೇ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
1981ರಲ್ಲಿ ಎಂಬಿಬಿಎಸ್, 1985ರಲ್ಲಿ ಎಂಎಸ್ ಪೂರ್ಣಗೊಳಿಸಿದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ.
13 ವರ್ಷದಿಂದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ. ವೈದ್ಯರಾಗಿ, ಎಚ್’ಒಡಿ ಆಗಿ, ಮೆಡಿಕಲ್ ಸೂಪರಿಂಟೆಂಡೆಂಟ್ ಆಗಿ, ಪ್ರಾಂಶುಪಾಲರಾಗಿ, ಡೀನ್ ಆಗಿ ಸೇವೆ ಸಲ್ಲಿಸಿದ್ದ ಲಾಹೋಟಿ ಅವರು, ಶಸ್ತಚಿಕಿತ್ಸಾ ವಿಭಾಗದಲ್ಲೂ ಸಹ ಅಪರಿಮಿತ ಸೇವೆ ಸಲ್ಲಿಸಿದ್ದಾರೆ.
ಇವರ ನಿಧನಕ್ಕೆ ತಡಿಕೆಲ ಸುಬ್ಬಯ್ಯ ಟ್ರಸ್ಟ್ ಪ್ರಮುಖರು, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯಸ್ಥರು, ವೈದ್ಯರು, ವೈದ್ಯಕೀಯೇತರ ಸಿಬ್ಬಂದಿಗಳು, ವಿದ್ಯಾರ್ಥಿ ವೃಂದದವರು ಕಂಬನಿ ಮಿಡಿದಿದ್ದಾರೆ.