ಅಣ್ಣಾ ಹಜಾರೆ ಹೋರಾಟಕ್ಕೆ ಬೆಂಬಲ

ಶಿವಮೊಗ್ಗ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮಾ.೨೩ ರಂದು ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಜನಲೋಕಪಾಲ್ ಮಸೂದೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು ಈ ಹೋರಾಟಕ್ಕೆ ನಗರದ ಅಣ್ಣಾ ಹಜಾರೆ ಹೋರಾಟ ಸಮಿತಿ ಬೆಂಬಲ ಸೂಚಿಸಿದೆ.
ಜನಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೋರಾಟ ಕೈಗೊಳ್ಳ ಲಾಗಿದೆ. ಕೇಂದ್ರ ಸರ್ಕಾರ ಚುನಾವಣೆ ಸುಧಾರಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಈ ನಿಟ್ಟಿನಲ್ಲಿ ಕ್ರಮಕ್ಕೆ ಒತ್ತಾಯಿಸಿ ಅಣ್ಣಾ ಹಜಾರೆ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ೪ ವರ್ಷ ಕಳೆದರೂ ನುಡಿದಂತೆ ಜನಲೋಕಪಾಲ್ ಮಸೂದೆ ಜಾರಿಗೊಳಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯುಪಿಎ ಸರ್ಕಾರದ ಅವಧಿಯಲ್ಲಿ ಜನಲೋಕ ಪಾಲ್ ಮಸೂದೆ ಜಾರಿಗೆ ಹೋರಾಟ ನಡೆಸಿದಾಗ ಈಗಿನ ಸರ್ಕಾರದ ಮುಖ್ಯ ಜನಪ್ರತಿನಿಧಿಗಳು ಮಸೂದೆ ಜಾರಿಗೊಳಿಸುವುದಾಗಿ ಆಗ ಭರವಸೆ ನೀಡಿದ್ದರು. ಆದರೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬಂದರೂ ಜಾಣ ಕುರುಡು ಪ್ರದರ್ಶಿಸುತ್ತಿದ್ಧಾರೆ ಎಂದು ಟೀಕಿಸಿದರು.
ಪ್ರಧಾನಿಯವರಿಗೆ ಜನಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಅಣ್ಣಾಹಜಾರೆ ೨೧ ಬಾರಿ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಯುಪಿಎ ಸರ್ಕಾರದ ವಿರುದ್ದ ಅಣ್ಣಾಹಜಾರೆ ನಡೆಸಿದ ಜನಲೋಕ ಪಾಲ್ ಮಸೂದೆ ಹೋರಾಟ ಮೋದಿ ಪ್ರಧಾನಿಯಾ ಗಲು ಪ್ರಮುಖ ಕಾರಣ ಎಂದು ಹೇಳಿದರು. ಈ ಎಲ್ಲ ವಿಚಾರ ಗಳ ಬಗ್ಗೆ ಪ್ರಧಾನಿಯವರು ಮನಗಂಡು ಕೂಲಂಕಷ ವಾಗಿ ಚರ್ಚಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಟಿ.ಎಂ.ಅಶೋಕ್ ಯಾದವ್, ಡಾ.ಬಿ.ಎಂ. ಚಿಕ್ಕಸ್ವಾಮಿ, ಬಾಬಣ್ಣ ಮೊದಲಾದವರು ಇದ್ದರು.

SHARE
Previous article23 MAR 2018
Next article24 MAR 2018

LEAVE A REPLY

Please enter your comment!
Please enter your name here