ಹಾಸನ: ಪ್ರಜ್ವಲ್ ರೇವಣ್ಣ ಮೇಲೆ ಅತ್ಯಾಚಾರ ಪ್ರಕರಣ ಇನ್ನೂ ಸುದ್ದಿಯಲ್ಲಿರುವಾಗಲೇ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ.
“ಸೂರಜ್ ರೇವಣ್ಣ ಅವರು ತನ್ನ ಅಸಹಜ ಲೈಂಗಿಕ ಕ್ರಿಯೆ ನಡೆಸಿ, ಈಗ ಹತ್ಯೆಗೆ ಸಂಚು ರೂಪಿಸಿದ್ದಾರೆ” ಎಂದು ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತನೋರ್ವ ಪೊಲೀಸ್ ದೂರು ನೀಡಿದ್ದಾರೆ.
ತನ್ನ ದೂರಿನ ಪ್ರತಿಯನ್ನು ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಕಳುಹಿಸಿದ್ದಾರೆ.
“ ಸೂರಜ್ ಅವರು ಜೂ. 16ರಂದು ತನಗೆ ಉದ್ಯೋಗದ ಭರವಸೆ ನೀಡಿ ಗನ್ನಿಕಡ ತೋಟದ ಮನೆಗೆ ಕರೆಸಿಕೊಂಡಿದ್ದರು. ಅವರನ್ನು ನಂಬಿ ಅಲ್ಲಿಗೆ ಹೋಗಿದ್ದೆ. ಅಲ್ಲಿ ತನ್ನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಾಯಿಬಿಟ್ಟರೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಕುಗ್ಗಿದ್ದೇನೆ” ಎಂದು ದೂರಿನಲ್ಲಿ ಹೇಳಿದ್ದಾರೆ.
ದೌರ್ಜನ್ಯಕ್ಕೊಳಗಾಗಿರುವ ವ್ಯಕ್ತಿಯು ಜೆಡಿಎಸ್ ಕಾರ್ಯಕರ್ತನಾಗಿರುವುದು ಮಾತ್ರವಲ್ಲದೇ, ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾನೆ.