Monday, July 22, 2024
Google search engine
Homeಇ-ಪತ್ರಿಕೆಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಬಂಧಿತರಾಗಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಸೂರಜ್ ರೇವಣ್ಣ ಅವರನ್ನು ಪೊಲೀಸರು ‘ಶಾಸಕರು-ಸಂಸದರ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ (42ನೇ ಎಸಿಎಂಎಂ) ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್‌ ಶಿವಕುಮಾರ್ ಅವರ ಕೋರಮಂಗಲದಲ್ಲಿರುವ ನಿವಾಸದಲ್ಲಿ ಭಾನುವಾರ ಸಂಜೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು, ಸೂರಜ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೂರಜ್ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377, 342 ಹಾಗೂ 506ರ ಅಡಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ಸಂತ್ರಸ್ತ ಯುವಕ ಮತ್ತು ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದರು.

ಈ ನಡುವೆ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದರಿಂದ ಹಾಸನದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಸೂರಜ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು, ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments