ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟಿರುವ ಸೂರಜ್ ರೇವಣ್ಣನನ್ನು 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
ಅದೇ ರೀತಿ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹಲವು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದರು. ಆದರೆ ಎರಡು ಪ್ರಕರಣಗಳ ವಿಚಾರಣೆಗಾಗಿ ಎಸ್ ಐಟಿ ಮತ್ತೊಮ್ಮೆ ಅವರನ್ನು ವಶಕ್ಕೆ ಪಡೆದು ಇಂದು ಕೋರ್ಟ್ ಗೆ ಹಾಜರುಪಡಿಸಿತ್ತು. ನ್ಯಾಯಾಲಯವು ಈತನಿಗೆ ಜು. 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
14 ದಿನ ಕಸ್ಟಡಿಗೆ ನೀಡಲುಗೆ ಸಿಐಡಿ ಅಧಿಕಾರಿಗಳು ನ್ಯಾಯಾಲಯದಲ್ಲಿ ಕೇಳಿದ್ದರು. ಆದರೆ ನ್ಯಾಯಾಲಯವು 8 ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.