Sunday, September 8, 2024
Google search engine
Homeಇ-ಪತ್ರಿಕೆನೀಟ್‌ ಪರೀಕ್ಷೆಯಲ್ಲಿ ಅಕ್ರಮದ ಶಂಕೆ: ಎನ್‌ ಎಸ್‌ ಯು ಐ ಪ್ರತಿಭಟನೆ

ನೀಟ್‌ ಪರೀಕ್ಷೆಯಲ್ಲಿ ಅಕ್ರಮದ ಶಂಕೆ: ಎನ್‌ ಎಸ್‌ ಯು ಐ ಪ್ರತಿಭಟನೆ

ಶಿವಮೊಗ್ಗ : ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಸೋಮವಾರ  ಎನ್‌ಎಸ್‌ಯುಐ ಜಿಲ್ಲಾ ಘಟಕದ ವತಿಯಿಂದ ನಗರದ ಮಹಾವೀರದಲ್ಲಿ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಭಾರಿ ಅಕ್ರಮ ನಡೆದಿರುವ ಸಾಧ್ಯತೆಯಿದೆ. ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ. ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ನೀಟ್ ಫಲಿತಾಂಶ ವಿವಾದವಾಗಲು ಅನೇಕ ಅಂಶಗಳು ಕಾರಣವಾಗಿದ್ದು, ಒಟ್ಟು ೬೭ ವಿದ್ಯಾರ್ಥಿಗಳು ಮೊದಲ ರ?ಯಾಂಕ್ ಬಂದಿರುವುದು ಹಾಗೂ ಒಂದೇ ಪರೀಕ್ಷಾ ಕೇಂದ್ರದ ೮ ವಿದ್ಯಾರ್ಥಿಗಳು ಪ್ರಥಮ ರ?ಯಾಂಕ್ ಮಾಡಿರುವುದು ನೀಟ್ ಅಕ್ರಮ ನಡೆದಿರುವುದಕ್ಕೆ ಸಾಕ್ಷಿಯಂತಿದೆ. ರ?ಯಾಂಕ್ ಬಂದಿರುವವರಲ್ಲಿ ಆರು ವಿದ್ಯಾರ್ಥಿಗಳು ಒಂದೇ ತರಬೇತಿ ಕೇಂದ್ರದವರಾಗಿರುವುದು ಇನ್ನಷ್ಟು ಅನುಮಾನಗಳನ್ನು ಹುಟ್ಟಿಹಾಕಿದೆ. ಪ್ರಶ್ನೆ ಪತ್ರಿಕೆ ಸೋರಿಕೆ, ಒಂದೇ ತರಬೇತಿ ಕೇಂದ್ರ ಇವೆಲ್ಲವೂ ನೀಟ್ ಪರೀಕ್ಷೆಯಲ್ಲಿ ಅಕ್ರಮಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಎಂದು ಸಂಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಹೆಚ್.ಸಿ. ಯೋಗೇಶ್ ಮಾತನಾಡಿ, ಕೇಂದ್ರ ಸರ್ಕಾರ  ತರಾತುರಿಯಲ್ಲಿ ಕೃಪಾಂಕ ನೀಡಿರುವುದು, ಲೋಕಸಭೆ ಚುನಾವಣಾ ಫಲಿತಾಂಶ ದಿನದಂದು ನೀಟ್ ಫಲಿತಾಂಶ ಪ್ರಕಟಿಸಿರುವುದು ಅನುಮಾನಗಳನ್ನು ಹೆಚ್ಚಿಸಿದೆ. ನೀಟ್ ಪರೀಕ್ಷೆ ಫಲಿತಾಂಶ ನಂತರ ದೇಶದ ಕೆಲವೆಡೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಳ್ಳದಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕಿದೆ ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಕೂಡಲೇ ಮರು ಪರೀಕ್ಷೆ ನಡೆಸಬೇಕು ಎಂಬುದು ದೇಶದ ವೈದ್ಯಕೀಯ ಸೀಟು ಆಕಾಂಕ್ಷಿಗಳು ಹಾಗೂ  ಆಗ್ರಹವಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.

ಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ  ಹರ್ಷಿತ್, ಕಾರ್ಯಧ್ಯಕ್ಷ ರವಿ ಕಾಟಿಕೆರೆ, ಚಂದ್ರು ಜಿ ರಾವ್, ರವಿ, ಆಕಾಶ, ಜೀವನ್, ಲಿಂಗರಾಜು, ಗಿರೀಶ್, ಶಿವು, ಕುಮಾರ್, ಪ್ರದೀಪ್, ನಿಖಿಲ್,ಫರಾಜ್, ವರುಣ್ ವಿ ಪಂಡಿತ್,  ನಾಗೇಂದ್ರ, ಸಾಗರ್, ಮಂಜು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular

Recent Comments