ಶಿರಾಳಕೊಪ್ಪ: ತೊಗರ್ಸಿ-ಶಿರಾಳಕೊಪ್ಪ ರಸ್ತೆಯ ಜಾವಗಟ್ಟಿ ಹತ್ತಿರದ ದೇವಿಕೊಪ್ಪ ಗ್ರಾಮದಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತಪಟ್ಟ ಸಂತ್ರಸ್ತನನ್ನು ಶಿವಮೊಗ್ಗದ ಶುಭಮಂಗಳ ಬಳಿಯ ಬಸವ ಪ್ರಸಾದ್ ಎಂದು ಗುರುತಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಬಸ್ ಕೂಡ ಪಲ್ಟಿಯಾಗಿದೆ. ಬಸ್ ನಲ್ಲಿರುವ ಪ್ರಯಾಣಿಕರು ಪ್ರಾಣಾಪಾಯಾದಿಂದ ಪಾರಾಗಿದ್ದು, ಗಾಯಾಳುಗಳನ್ನು ಶಿರಾಳಕೊಪ್ಪ ಸಮೀಪದ ಬೆಲವಂತನಕೊಪ್ಪ ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾರಿನ ಅತಿವೇಗವೇ ಈ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಶಿರಾಳಕೊಪ್ಪದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.