ಶಿವಮೊಗ್ಗ : ದೇಶದ ಪ್ರತಿಯೊಬ್ಬರೂ ಕಾನೂನಿನ ಮುಂದೆ ಸಮಾನರು. ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ನ್ಯಾಯಾಲ ಯದ ಮೊರೆ ಹೋಗುವ ಎಲ್ಲರಿಗೂ ಸಮಾನವಾದ, ನ್ಯಾಯಯುತವಾದ ಹಾಗೂ ಒಪ್ಪಿತ ತೀರ್ಮಾನವನ್ನು ನಿಷ್ಪಕ್ಷಪಾತವಾಗಿ ನೀಡುವ ಏಕೈಕ ವ್ಯವಸ್ಥೆಯೇ ನ್ಯಾಯಾಂಗ ವ್ಯವಸ್ಥೆಯಾ ಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಆರ್.ಬಿ.ಧರ್ಮಗೌಡರ ಹೇಳಿದರು.
ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾ ಗಿದ್ದ ಕಾನೂನು ಸಾಕ್ಷರತಾ ರಥಯಾತ್ರೆ ಹಾಗೂ ಜನತಾ ನ್ಯಾಯಾಲಯ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಕಾನೂನು ರಥಯಾತ್ರೆಯು ಇಂದಿನಿಂದ ಮಾರ್ಚ್ ೨೩ರವರೆಗೆ ಶಿವಮೊಗ್ಗ ತಾಲೂಕಿನ ಆಯ್ದ ೧೨ಗ್ರಾಮ ಗಳಲ್ಲಿ ಕಾನೂನು ರಥಯಾತ್ರೆಯು ಸಂಚರಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದೆ ಎಂದರು.
ಜಿ.ಪಂ. ಸಿಇಓ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಆಯ್ದ ಗ್ರಾಮೀಣ ಪ್ರದೇಶ ಗಳಲ್ಲಿ ಏರ್ಪಡಿಸಲಾಗುವ ಕಾನೂನು ಅರಿವು ರಥಯಾತ್ರೆ ಕಾರ್ಯಕ್ರಮವು ಯಶಸ್ವಿಗೊಳ್ಳಲು ಈಗಾಗಲೇ ಸಂಬಂಧಿಸಿದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಲ್ಲದೇ ಗ್ರಾಮೀಣ ಪ್ರದೇಶದ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೋರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಶೇಖರ ಸಿ.ಬಾದಾಮಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಮಧು, ಡಿ.ಎನ್.ಹಾಲಸಿದ್ಧಪ್ಪ ಸೇರಿದಂತೆ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಹಿರಿಯ ಮತ್ತು ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರು, ವಕೀಲರುಗಳು ಹಾಗೂ ಕಕ್ಷಿದಾರರು ಆಗಮಿಸಿದ್ದರು.