Tuesday, July 23, 2024
Google search engine
Homeಇ-ಪತ್ರಿಕೆಭದ್ರಾವತಿ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅಂದರ್

ಭದ್ರಾವತಿ: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅಂದರ್

ಶಿವಮೊಗ್ಗ : ಮಂಗಳವಾರ ಮಧ್ಯಾಹ್ನ ಭದ್ರಾವತಿಯ ಟೌನ್ ಅನ್ವರ್ ಕಾಲೋನಿ, ಮೋಮಿನ್ ಮೊಹಲ್ಲಾದ ಕೆಇಬಿ ಎದುರು ಸಾರ್ವಜನಿಕ ರಸ್ತೆಯಲ್ಲಿ ಕಾರ್ ಒಂದನ್ನು ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಿ, ಅಂದಾಜು ರೂ.28,000 ಮೌಲ್ಯದ 1 ಕೆಜಿ 135 ಗ್ರಾಂ ತೂಕದ ಒಣ ಗಾಂಜಾವನ್ನು, ಗಾಂಜಾ ಮಾರಾಟ ಮಾಡಿ ಗಳಿಸಿದ ರೂ. 6,000 ನಗದು ಹಣವನ್ನು ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು ರೂ.1,10,000 ಮೌಲ್ಯದ ಪೋರ್ಡ್ ಫಿಗೋ ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್.ಜಿ.ಕೆ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಅನಿಲ್ ಕುಮಾರ್ ಭೂಮಾರೆಡ್ಡಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಕಾರಿಯಪ್ಪ. ಎ.ಜಿ ಅವರ ಮಾರ್ಗದರ್ಶನದಲ್ಲಿ ಭದ್ರಾವತಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ನಾಗರಾಜ್ ಹಾಗೂ ಭದ್ರಾವತಿ ನಗರ ವೃತ್ತ ಸಿಪಿಐ ಶ್ರೀಶೈಲ್ ಅವರ ಮೇಲ್ವಿಚಾರಣೆಯಲ್ಲಿ, ಹಳೆನಗರ ಪೊಲೀಸ್ ಠಾಣೆ ಪಿಎಸ್‍ಐ ಶರಣಪ್ಪ.ಹೆಚ್ ಅವರ ನೇತೃತ್ವದ ಸಿಬ್ಬಂಧಿಗಳ ತಂಡವು ಸ್ಥಳಕ್ಕೆ  ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಾಬೀತ್ ಅಲಿಯಾಸ್ ಮಹಮ್ಮದ್ ಸಾಬೀತ್ (23 ವರ್ಷ) ಮೋಮಿನ್ ಮೊಹಲ್ಲಾ, ಭದ್ರಾವತಿ ಈತನನ್ನು ದಸ್ತಗಿರಿ ಮಾಡಿ, ಆರೋಪಿಯಿಂದ ಅಂದಾಜು ರೂ.28,000 ಮೌಲ್ಯದ 1 ಕೆಜಿ 135 ಗ್ರಾಂ ತೂಕದ ಒಣ ಗಾಂಜಾವನ್ನು, ಗಾಂಜಾ ಮಾರಾಟ ಮಾಡಿಗಳಿಸಿದ ರೂ.6,000 ನಗದು ಹಣವನ್ನು ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು ರೂ.1,10,000 ಮೌಲ್ಯದ ಫೋರ್ಡ್ ಫಿಗೋ ಕಾರನ್ನು ವಶಪಡಿಸಿಕೊಂಡು, ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 0107/2024 ಕಲಂ 20(ಬಿ)(||)(ಬಿ) ಎನ್‍ಡಿಪಿಎಸ್ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular

Recent Comments