Monday, July 22, 2024
Google search engine
Homeಇ-ಪತ್ರಿಕೆಒಂಟಿ ಮಹಿಳೆಯರ ಪೀಡಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಒಂಟಿ ಮಹಿಳೆಯರ ಪೀಡಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಒಂಟಿ ಮಹಿಳೆಯರನ್ನು ಪೀಡಿಸುತ್ತಿದ್ದ ಆರೋಪದಲ್ಲಿ ಯುವಕನೋರ್ವನಿಗೆ ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಗ್ರಾಮದಲ್ಲಿ ನಡೆದಿದೆ.

ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಅಂಗನವಾಡಿ ಶಿಕ್ಷಕಿಯೊಂದಿಗೂ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ. ಯುವಕನನ್ನು ಮಾವಿನಹಳ್ಳಿ ಗ್ರಾಮದ ಮಂಜು ಎಂದು ಗುರುತಿಸಲಾಗಿದೆ.

ತೋಟದಲ್ಲಿ ಅವಿತು ಕುಳಿತಿದ್ದ ಯುವಕನನ್ನು ಹಿಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಚಿಕ್ಕಮಗಳೂರು ತಾಲೂಕಿನ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments