Saturday, December 14, 2024
Google search engine
Homeಇ-ಪತ್ರಿಕೆಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ನೀರು ಹೊರ ಬಿಡುವ ಸಾಧ್ಯತೆ

ಯಾವುದೇ ಕ್ಷಣದಲ್ಲಿ ಲಿಂಗನಮಕ್ಕಿ ನೀರು ಹೊರ ಬಿಡುವ ಸಾಧ್ಯತೆ

ಶಿವಮೊಗ್ಗ: ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ 1801 ಅಡಿ ತಲುಪಿದ್ದು ಶೇ.65 ರಷ್ಟು ನೀರು ಸಂಗ್ರಹವಾಗಿದ್ದು 60 ಸಾವಿರ ಕ್ಯೂಸೆಕ್ಸ್ ಗಿಂತಲೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಇದೇ ರೀತಿ ಮುಂದುವರೆದಲ್ಲಿ ಶೀಘ್ರದಲ್ಲಿ ಜಲಾಶಯ ತುಂಬುವ ಸಾಧ್ಯತೆ ಇದೆ.

ಅಣೇಕಟ್ಟು ಸುರಕ್ಷತೆ ದೃಷ್ಟಿಯಿಂದ  ಯಾವುದೇ ಸಮಯದಲ್ಲೂ ಹೆಚ್ಚುವರಿ ನೀರನ್ನು ಜಲಾಶಯದಿಂದ ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಗಲ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು (ಕಾಮಗಾರಿ) ಮೊದಲ ಮುನ್ನೆಚ್ಚರಿಕೆಯ ಸೂಚನೆ ನೀಡಿದ್ದಾರೆ.

ಜಲಾಶಯದ ಕೆಳಭಾಗದ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಕ್ಕೆ ಸೂಚಿಸಲಾಗಿದೆ.

RELATED ARTICLES
- Advertisment -
Google search engine

Most Popular

Recent Comments