Wednesday, November 13, 2024
Google search engine
Homeಇ-ಪತ್ರಿಕೆಡೆಂಗ್ಯೂಗೆ ನಿಖರ ಚಿಕಿತ್ಸೆ ಇಲ್ಲ; ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಿ; ಸಂಸದ ಡಾ.ಸಿಎನ್ ಮಂಜುನಾಥ್‌

ಡೆಂಗ್ಯೂಗೆ ನಿಖರ ಚಿಕಿತ್ಸೆ ಇಲ್ಲ; ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಿ; ಸಂಸದ ಡಾ.ಸಿಎನ್ ಮಂಜುನಾಥ್‌

ಬೆಂಗಳೂರು: ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಇಲ್ಲ. ಕೋವಿಡ್‌ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ಬೇಕಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ಸಂಸದ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರ ನಿಯಂತ್ರಣವೆಂದರೆ ಸೊಳ್ಳೆಗಳ ನಿಯಂತ್ರಣ. ಮಳೆಗಾಲದ ಆರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಇದು.  ಇದನ್ನು ನಿಯಂತ್ರಣ ಮಾಡದಿದ್ದರೆ ಚಿಕನ್ ಗುನ್ಯಾ, ಝಿಕಾ ವೈರಸ್ ಗಳ ದಾಳಿ ಮಾಡಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಡೆಂಗ್ಯೂ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲರಿಗೂ ತುರ್ತು ಚಿಕಿತ್ಸೆ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ನ್ಸಿ ಘೋಷಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದರು.

ಡೆಂಗ್ಯೂ ಜ್ವರಕ್ಕೆ ಕೋವಿಡ್ ಮಾದರಿಯಲ್ಲಿಯೇ ಚಿಕಿತ್ಸೆಯನ್ನು ನೀಡಬೇಕು. ಅವಶ್ಯಕತೆ ಇರುವವರಿಗೆ ಮೊದಲೇ ಚಿಕಿತ್ಸೆ ನೀಡಬೇಕು. ಹೊರದೇಶಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಕಾಯಿಲೆಯನ್ನು ತಡೆಗಟ್ಟಿದ್ದಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular

Recent Comments