Saturday, October 12, 2024
Google search engine
Homeಇ-ಪತ್ರಿಕೆಅಡ್ವಾಣಿ ನಿಧನವೆಂದು ಮೌನಾಚರಣೆ ಮಾಡಿದ ಕೇಂದ್ರ ಸಚಿವ ವಿ.ಸೋಮಣ್ಣ

ಅಡ್ವಾಣಿ ನಿಧನವೆಂದು ಮೌನಾಚರಣೆ ಮಾಡಿದ ಕೇಂದ್ರ ಸಚಿವ ವಿ.ಸೋಮಣ್ಣ

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಎಡವಟ್ಟು ಮಾಡಿಕೊಂಡಿದ್ದು ಬದುಕಿರುವ ಅಡ್ವಾಣಿಯವರಿಗೆ ಶ್ರದ್ದಾಂಜಲಿ ಸಲ್ಲಿಸಿದ ಪ್ರಸಂಗ ಶನಿವಾರ ತುಮಕೂರಿನ ಗುಬ್ಬಿಯಲ್ಲಿ ನಡೆದಿದೆ.

ಅಡ್ವಾಣಿ ನಿಧನರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡಿ ಎಂದು ಕೇಂದ್ರ ಸಚಿವ ವಿ. ಸೋಮಣ್ಣ. ಸತ್ಯ ತಿಳಿದ ಬಳಿಕ ಕ್ಷಮೆಯಾಚನೆ ಮಾಡಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಯವರು ಇತ್ತೀಚೆಗೆಯಷ್ಟೇ ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಚಿಕಿತ್ಸೆ ಪಡೆದು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ ಸೋಮಣ್ಣ ಅತಿಥಿಯಾಗಿ ಭಾಗವಹಿಸಿದ್ದರು.

 “ಇದೀಗ ತಾನೇ ಮಾಹಿತಿ ಬಂದಿದೆ. ಅಡ್ವಾಣಿಯವರು ಸಾವನ್ನಪ್ಪಿದ್ದಾರೆ. ನಾನು ದೆಹಲಿಗೆ ಹೋಗಬೇಕಿದೆ. ಈ ವಿಚಾರಕ್ಕೆ ದೆಹಲಿಗೆ ತೆರಳಬೇಕಾಗಿರುವ ಕಾರಣ ಕಾರ್ಯಕ್ರಮ ಮತ್ತೊಮ್ಮೆ ಮಾಡೋಣ. ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡಿ” ಎಂದು ಬಹಿರಂಗ ಸಭೆಯಲ್ಲಿ ಸೋಮಣ್ಣ ಮನವಿ ಮಾಡಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments