ಶಿವಮೊಗ್ಗ: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಮತ್ತು ಅಧಿಕಾರಿ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಜೂ.28ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಹೇಳಿದರು.
ಬುಧವಾರ ನಗರದ ಪತ್ರಿಕಾ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು ೧೮೭ ಕೋಟಿ ರೂ. ಅವ್ಯವಹಾರವಾಗಿದೆ. ಅಧಿಕಾರಿಯಾಗಿದ್ದ ಚಂದ್ರಶೇಖರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಆದರೆ ಇದರಿಂದ ನ್ಯಾಯ ಸಿಗುವುದಿಲ್ಲ. ಆದ್ದರಿಂದ ಇದನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ಗಮನಕ್ಕೆ ಬಾರದೆ ಈ ಹಗರಣ ನಡೆಯಲು ಸಾಧ್ಯವಿಲ್ಲ. ಇವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆದರೆ ಅಷ್ಟೇ ಸಾಲದು ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಅದು ಬಹಿರಂಗವಾಗಬೇಕು. ಅಧಿಕಾರದ ಹಸ್ತಕ್ಷೇಪವಿಲ್ಲದೆ ಇಷ್ಟೊಂದು ದೊಡ್ಡ ಆರ್ಥಿಕ ಅವ್ಯವಹಾರ ಆಗಲು ಸಾಧ್ಯವಿಲ್ಲ. ಆದ್ದರಿಂದ ರಾಜ್ಯಾದಾದ್ಯಂತ ಈ ಪ್ರತಿಭಟನೆ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಇದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚವು ಜೂ.೨೯ರಂದು ಶಿಮೂಲ್ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಗುವುದು ಎಲ್ಲಾ ವಸ್ತುಗಳ ಬೆಲೆಗಳನ್ನು ಕೂಡಲೇ ಇಳಿಸಬೇಕು ಎಂದು ಅವರು ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಜಯರಾಮ್, ಕೆ.ಬಿ.ಅಣ್ಣಪ್ಪ, ಧನಂಜಯಕುಮಾರ್, ಗುಡ್ಡಪ್ಪ ಜಿ. ಇದ್ದರು.