Tuesday, November 5, 2024
Google search engine
Homeಇ-ಪತ್ರಿಕೆವಾಲ್ಮೀಕಿ ಹಗರಣ: ಇಡಿ ವಶಕ್ಕೆ ಮಾಜಿ ಸಚಿವ ನಾಗೇಂದ್ರ

ವಾಲ್ಮೀಕಿ ಹಗರಣ: ಇಡಿ ವಶಕ್ಕೆ ಮಾಜಿ ಸಚಿವ ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಬಹುಕೋಟಿ ಹಗರಣದಲ್ಲಿ ಇ.ಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬೆಂಗಳೂರಿನ ನಿವಾಸದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗೆ ನಾಗೇಂದ್ರ ಅವರ ಮನೆಗೆ ಜಾರಿ ನಿರ್ದೇಶನಾಲಯದ ನಾಲ್ವರು ಅಧಿಕಾರಿಗಳ ತಂಡ ಆಗಮಿಸಿತು. ಬಳಿಕ ಮಾಜಿ ಸಚಿವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಶಾಂತಿನಗರ ಇಡಿ ಕಚೇರಿಗೆ ಕರೆತಂದಿದ್ದಾರೆ. ಇತ್ತ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಅವರ ಇಡಿ ತಂಡ ಹೋಗಿದೆ ಎನ್ನಲಾಗಿದೆ. ಬುಧವಾರವಷ್ಟೇ ನಾಗೇಂದ್ರ, ದದ್ದಲ್‌ ಅವರ ಆಪ್ತರು ಹಾಗೂ ಇತರ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು.

ಆ ಬಳಿಕ ಅಲ್ಲಿಂದ ಶಾಂತಿನಗರದ ಕಚೇರಿಗೆ ಕರೆದೊಯ್ದಿದ್ದಾರೆ. ಕಳೆದ ಎರಡು 2 ದಿನಗಳಿಂದ ನಾಗೇಂದ್ರ ಮನೆಯಲ್ಲಿ ವಾಲ್ಮೀಕಿ ನಿಗಮದ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ವಿಚಾರಣೆ ಮಾಡಿ ಮುಂಜಾನೆ ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣದಲ್ಲಿ ಈಗಾಗಲೇ ಸಿಬಿಐ ಸಹ ತನಿಖೆ ನಡೆಸಿದೆ. ಇದರ ಬೆನ್ನಲ್ಲೇ ಏಕಾಏಕಿ ಇ.ಡಿ ಅಧಿಕಾರಿಗಳು ಬುಧವಾರ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಬಸನಗೌಡ ದದ್ದಲ್ ನಿವಾಸಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು.

ಬುಧವಾರ ಬೆಳ್ಳಂಬೆಳಗ್ಗೆ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಅಧಿಕಾರಿಗಳು ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಾಸಕ ನಾಗೇಂದ್ರ ವಿರುದ್ಧ ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ ಆರೋಪ ಕೇಳಿ ಬಂದಿದೆ. ಹೈದರಾಬಾದ್‌ನ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ನಾಗೇಂದ್ರ ಪಿಎ ಹರೀಶ್‌ಗೆ ತಲುಪಿತ್ತು ಎನ್ನಲಾಗಿದೆ. ಅಲ್ಲದೆ ಏಪ್ರಿಲ್ ತಿಂಗಳಿನ ಎರಡನೇ ವಾರ ಪದ್ಮನಾಭನಿಂದ ಹರೀಶ್‌ 25 ಲಕ್ಷ ರೂ. ಹಣ ಪಡೆದಿದ್ದನು. ಈ ಬಗ್ಗೆ ಪಿಎ ಹರೀಶ್‌ಗೆ ಹಣ ನೀಡಿದ್ದಾಗಿ ಖುದ್ದು ಪದ್ಮನಾಭ್ ಹೇಳಿಕೆ ನೀಡಿದ್ದರು.

ನಾಗೇಂದ್ರ ಪರ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದ ಆರೋಪ ಇದ್ದು, ಮಾಜಿ ಸಚಿವ ನಾಗೇಂದ್ರ ಪರ 50 ರಿಂದ 60 ಕೋಟಿ ವ್ಯವಹಾರ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಹರೀಶ್‌ ಅವರನ್ನು ಇ.ಡಿ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮೊದಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದ ನಂತರ ವಿಪಕ್ಷಗಳು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದವು. ನಂತರ ನಾಗೇಂದ್ರ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

RELATED ARTICLES
- Advertisment -
Google search engine

Most Popular

Recent Comments