ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ರಾಜಕೀಯ ಬೆರೆಸುವುದಿಲ್ಲ. ನೊಂದ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.
ನಗರದ ವಿಆರ್‌ಎಸ್ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಮಂಗಳವಾರ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಬಿಜೆಪಿಯಿಂದ ೨ ಲಕ್ಷ ನೆರವು ನೀಡಿ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ‘ರೇಣುಕಾಸ್ವಾಮಿ ಹತ್ಯೆ ಅಮಾನವೀಯ ಕೃತ್ಯ. ನಾಗರೀಕ ಸಮಾಜದ ಯಾರೂ ಬೆಂಬಲಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಘಟನೆಯನ್ನು ಅತ್ಯುಗ್ರವಾಗಿ ಖಂಡಿಸಬೇಕು’ ಎಂದರು.
ಕೊಲೆ ನಡೆದು ಇಷ್ಟು ದಿನ ಕಳೆದರೂ ಕೂಡ ಸರ್ಕಾರದ ಪರವಾಗಿ ಯಾವೊಬ್ಬ ಸಚಿವರು ಬಾರದೆ ಇರುವುದು ಖಂಡನೀಯ ಸಂಗತಿ. ಇಂತಹ ಸಂದರ್ಭದಲ್ಲಿ ಯಾವುದೇ ವ್ಯಕ್ತಿಗೆ ಆದರೂ ಧೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ಪರಿಹಾರ ಕೊಟ್ಟು, ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿ ಕೊಲೆ ಪ್ರಕರಣದಲ್ಲಿ ಎಷ್ಟೇಲ್ಲಾ ದೊಡ್ಡ ವ್ಯಕ್ತಿಗಳು. ಭಾಗಿಯಾಗಿದ್ದಾರೆ ಎಂಬುದು ಜಗಜಾಹೀರು ಆಗಿದೆ. ಆದ್ದರಿಂದ ಸರ್ಕಾರ ಯಾರ ಮೂಲಾಜಿಗೂ ಒಳಗಾಗದೆ, ಪ್ರಮಾಣಿಕವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಮುಂದಾಗಬೇಕು ಎಂದು ಒತ್ತಾಯಿಸಿದರು.
ಸಂಸದ ಗೋವಿಂದ ಎಂ.ಕಾರಜೋಳ, ಶಾಸಕ ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಮುಖಂಡರಾದ ಎಸ್.ಲಿಂಗಮೂರ್ತಿ, ಕೆ.ಟಿ.ಕುಮಾರಸ್ವಾಮಿ, ಜಿ.ಎಸ್.ಅನಿತ್ ಸುರೇಶ್ ಸಿದ್ದಾಪುರ, ಸುರೇಶ್, ಬಸಮ್ಮ, ಶ್ಯಾಮಲ, ಇದ್ದರು.