ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕುರಿತು ತಮಗೆ ಅಧಿಕೃತ ದೂರು ಬಂದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸೂರಜ್ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಎಲ್ಲೂ ದೂರು ದಾಖಲಾಗಿಲ್ಲವೆಂದು ಹೇಳಿದರು.
ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣ ಏನು ಎಂಬುದಾಗಿ ತಿಳಿದುಕೊಂಡು ನಾವು ತನಿಖೆ ಮಾಡುತ್ತೇವೆ ಎಂದರು.
ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ಜೆಡಿಎಸ್ ಕಾರ್ಯಕರ್ತ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.
ಈ ಬೆಳವಣಿಗೆಯ ನಂತರ ಸೂರಜ್ ರೇವಣ್ಣ ಅವರ ಸಹಾಯಕ ಶಿವಕುಮಾರ್ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮತ್ತು ಸಂಬಂಧಿಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹಣ ವಸೂಲಿ ಮಾಡಲು ಸೂರಜ್ ರೇವಣ್ಣ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಶಿವಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.