ರಿಪ್ಪನ್ ಪೇಟೆ : ಡೆಂಗ್ಯೂವಿನ ತೀವ್ರ ಜ್ವರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಿಪ್ಪನ್ ಪೇಟೆ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಇಲ್ಲಿನ ನಾಯಕ್ ಫರ್ಟಿಲೈಸರ್ಸ್ ಮಾಲೀಕ ರಾಮದಾಸ್ ನಾಯಕ್‍ರವರ ಪುತ್ರ ರಾಘವೇಂದ್ರ ನಾಯಕ್ ಅವರ ಪತ್ನಿ ರಶ್ಮಿ ಆರ್. ನಾಯಕ್ (42 ವರ್ಷ) ಮೃತಪಟ್ಟ ಮಹಿಳೆಯಾಗಿದ್ದಾರೆ.
ಮೃತರಿಗೆ ಪತಿ, ಇಬ್ಬರು ಪುತ್ರರು ಇದ್ದಾರೆ. ಶಂಕಿತ ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿಯಾಗಿರುವ ಬಗ್ಗೆ ತಿಳಿದು ಬಂದಿದೆ.