ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ನಿನ್ನೆ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿರುವಂತೆ ನಾಟಕ ಮಾಡಿದ್ದಾನೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ.
ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಅಂಡ್ ಗ್ಯಾಂಗ್ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಿ, ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದರು.
ಬಂಧನವಾಗಿ ವಿಚಾರಣೆ ಸುರುವಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದಾನೆ. ಬೆಳಗಿನ ಜಾವ 4:45ರ ವೇಳೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ.
ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.ಬೆಂಗಳೂರಿನ ಐಶಾರಾಮಿ ಹಾಗೂ ಸಾಮಾನ್ಯ ಹೋಟೆಲ್‌ಗಳಿಗೆ ರಾಜಸ್ಥಾನದಿಂದ ಬರುತ್ತಿದ್ದ ಮಾಂಸ ಸರಬರಾಜಾಗುತ್ತಿತ್ತು.ಇದನ್ನು ಅಬ್ದುಲ್ ರಜಾಕ್ ಎಂಬವವರು ತರಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇಂದು ಅಬ್ದುಲ್ ರಜಾಕ್ ಅವರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.